ಬೆಂಗಳೂರು: ಸೂರ್ಯಕುಮಾರ್ ಯಾದವ್ ಸಾರಥ್ಯದ ಭಾರತದ ಟಿ20 ತಂಡದ ಆಟಗಾರರು ದಣ ಆಫ್ರಿಕಾ ಪ್ರವಾಸಕ್ಕೆ ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ವಿಮಾನ ಏರಿದರು.
ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜತೆಗೆ ತಂಡದ ಪ್ರಮುಖ ಆಟಗಾರರಾದ ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಮೊಹಮದ್ ಸಿರಾಜ್, ಯಶಸ್ವಿ ಜೈಸ್ವಾಲ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಣ ಆಫ್ರಿಕಾಕ್ಕೆ ಪ್ರಯಾಣಿಸಿದರು. ಪ್ರವಾಸದ ಆರಂಭದಲ್ಲಿ ಭಾರತ ತಂಡ 3 ಪಂದ್ಯಗಳ ಟಿ20 ಸರಣಿ ಆಡಲಿದ್ದು, ಭಾನುವಾರ ಡರ್ಬನ್ನಲ್ಲಿ ಮೊದಲ ಪಂದ್ಯ ನಡೆಯಲಿದೆ.
ಡಿಸೆಂಬರ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಅದರಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಬಳಿಕ ಡಿಸೆಂಬರ್ 26ರಿಂದ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮ ನಾಯಕತ್ವ ವಹಿಸಲಿದ್ದಾರೆ.