ನವದೆಹಲಿ: ಹಾಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಹೊರತುಪಡಿಸಿದರೆ ಉಳಿದ ಮ್ಯಾಚ್ಗಳಲ್ಲಿ ಭಾರತ ತಂಡ (Team India) ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ. ಪ್ರಮುಖವಾಗಿ ಬ್ಯಾಟ್ಸ್ಮನ್ಗಳು ಉಪಯುಕ್ತ ಆಟವಾಡದೆ ಇರುವುದು ತಂಡದ ಮ್ಯಾನೇಜ್ಮೆಂಟ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಟೆಸ್ಟ್ ಕ್ರಿಕೆಟ್ ತಜ್ಞ ಆಟಗಾರರಾದ ಚೇತೇಶ್ವರ್ ಪೂಜಾರಾ ಹಾಗೂ ಅಜಿಂಕ್ಯ ರಹಾನೆ ಅವರನ್ನು ತಂಡಕ್ಕೆ ವಾಪಸ್ ಕರೆತರುವಂತೆ ಕ್ರೀಡಾ ಪಂಡಿತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿರುವ ನಡುವೆಯೇ ಟೀಮ್ ಇಂಡಿಯಾ (Team India) ಆಟಗಾರನ ಕುರಿತು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ (Aakash Chopra) ನೀಡಿರುವ ಹೇಳಿಕೆ ಎಲ್ಲರ ಗಮನ ಸೆಳೆಯುತ್ತಿದೆ.
ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಆರಂಭಿಕ ಶುಭಮನ್ ಗಿಲ್ (Shubman Gill) ಪ್ರದರ್ಶನ ಕುರಿತು ಮಾತನಾಡಿರುವ ಆಕಾಶ್ ಚೋಪ್ರಾ (Aakash Chopra), ಶುಭಮನ್ ಗಿಲ್ ಪ್ರದರ್ಶನದ ಬಗ್ಗೆ ನಾವು ಮುಖ್ಯವಾಗಿ ಮಾತನಾಡಬೇಕಿದೆ. ಆತ ಏಷ್ಯಾದ ಹೊರಗಡೆ 16 ಇನ್ನಿಂಗ್ಸ್ನಲ್ಲಿ 40ಕ್ಕೂ ಅಧಿಕ ರನ್ ಬಾರಿಸಿಲ್ಲ. ಈತ ಒಂದಂಕಿ ಮೊತ್ತ ದಾಟಿಲ್ಲ. ಹೀಗಿದ್ದಾಗ ನಿಮ್ಮ ಪ್ರದರ್ಶನ ಹಾಗೂ ಸ್ಥಿರತೆ ಬಗ್ಗೆ ಮುಖ್ಯವಾಗಿ ಮಾತನಾಡಬೇಕಿದೆ.
ಕಳೆದ ಕೆಲವು ಪಂದ್ಯಗಳಲ್ಲಿ ಆತ ಉತ್ತಮವಾಗಿ ಆಡಿದನಾದರೂ ಇದು ಈತ ಮಾತ್ರವಲ್ಲದೇ ಉಳಿದವರ ಸಮಸ್ಯೆ ಕೂಡ ಅದೇ ಆಗಿದೆ. ಹೀಗಿರುವಾಗ ಶುಭಮನ್ ಗಿಲ್ ಸೇರಿದಂತೆ ಎಲ್ಲರೂ ತಮ್ಮ ಪ್ರದರ್ಶನದ ಬಗ್ಗೆ ಗಮನ ಹರಿಸಬೇಕಿದೆ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.