Test Captain: ಪ್ರಸ್ತುತ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭಾರತ ಹೀನಾಯವಾಗಿ ಸೋತ ದಿನದಿಂದಲೂ ಟೀಮ್ ಇಂಡಿಯಾದಲ್ಲಿ ಯಾವುದು ಸರಿ ಕಾಣುತ್ತಿಲ್ಲ. ಒಬ್ಬ ಜವಾಬ್ದಾರಿಯುತ ನಾಯಕನಾಗಿ ರೋಹಿತ್ ಶರ್ಮ ತೋರಿದ ಕಳಪೆ ಪ್ರದರ್ಶನಕ್ಕೆ ಟೀಮ್ ಇಂಡಿಯಾ ಕೋಚ್ನಿಂದ ಹಿಡಿದು ಮಾಜಿ ಕ್ರಿಕೆಟಿಗರು ಭಾರೀ ಬೇಸರ ಹೊರಹಾಕಿದ್ದಾರೆ. ಸದ್ಯ ಇದೇ ರೋಹಿತ್ರನ್ನು ಟೆಸ್ಟ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವಂತೆ ಪರೋಕ್ಷವಾಗಿ ಒತ್ತಾಯಿಸಿರುವುದು ಸದ್ಯ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದೆ.
ಇದನ್ನೂ ಓದಿ: ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೆ 18 ತಿಂಗಳಲ್ಲಿ 55 ಕೆಜಿ ಕಳೆದುಕೊಂಡ ನಟ! Actor losing 55 kgs in 18 months
ಆಸೀಸ್ ವಿರುದ್ಧ ಕ್ಯಾಪ್ಟನ್ ಆಟ ತೋರದ ರೋಹಿತ್ ಶರ್ಮ, ಅತ್ಯಂತ ಕಳಪೆ ಪ್ರದರ್ಶನದ ಮೂಲಕ ವ್ಯಾಪಕ ಟೀಕೆ, ವ್ಯಂಗ್ಯಗಳಿಗೆ ಗುರಿಯಾಗಿದ್ದಾರೆ. ವರದಿಯ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧದ ಸರಣಿ ಸೋಲಿನ ನಂತರ ರೋಹಿತ್ ಟೆಸ್ಟ್ ಕ್ರಿಕೆಟ್ ಕ್ಯಾಪ್ಟನ್ ಆಗಿ ಮುಂದುವರಿಯುವ ಸಾಧ್ಯತೆಯಿಲ್ಲ ಎನ್ನಲಾಗಿದ್ದು, ಮುಂಬರುವ ಟೆಸ್ಟ್ ಮ್ಯಾಚ್ಗಳಿಂದ ರೋಹಿತ್ ಕೇವಲ ಒಬ್ಬ ಆರಂಭಿಕ ಬ್ಯಾಟರ್ ಆಗಿ ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.
ಈ ವಿಷಯ ಕ್ರಿಕೆಟ್ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದ್ದು, ರೋಹಿತ್ ಕ್ಯಾಪ್ಟನ್ಸಿಯಿಲ್ಲ ಎಂದಾದರೆ, ಅವರ ಸ್ಥಾನಕ್ಕೆ ಮೊದಲ ಟೆಸ್ಟ್ಗೆ ಕ್ಯಾಪ್ಟನ್ ಆಗಿದ್ದ ಜಸ್ಪ್ರೀತ್ ಬುಮ್ರಾಗೆ ತಂಡದ ಜವಾಬ್ದಾರಿ ಹೊರಲಿದ್ದಾರೆಯೇ ಎಂಬ ಪ್ರಶ್ನೆಗಳು ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ವರದಿಗಳು ಸೂಚಿಸಿರುವ ಪ್ರಕಾರ, ಬುಮ್ರಾ ಬದಲಿಗೆ ವಿರಾಟ್ ಕೊಹ್ಲಿ ಕ್ಯಾಪ್ಟನ್ ಜವಾಬ್ದಾರಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನ ಪಾತ್ರದಿಂದ ಕೆಳಗಿಳಿದಿದ್ದ ವಿರಾಟ್ ಕೊಹ್ಲಿ, ಟೀಮ್ ಇಂಡಿಯಾವನ್ನು 68 ಪಂದ್ಯಗಳಲ್ಲಿ ಅತ್ಯುತ್ತಮ ಗೆಲುವಿನ ಸರಾಸರಿಯೊಂದಿಗೆ ಮುನ್ನಡೆಸಿದ್ದಾರೆ. 40 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ವಿರಾಟ್, ಕೇವಲ 17 ಮ್ಯಾಚ್ಗಳಲ್ಲಿ ಮಾತ್ರ ಸೋಲನ್ನು ಕಂಡಿದ್ದಾರೆ. ಇದರ ಹೊರತಾಗಿಯೂ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದ ಮೊದಲ ಭಾರತೀಯ ನಾಯಕರಾಗಿ ಕೊಹ್ಲಿ ಹೊರಹೊಮ್ಮಿದ್ದಾರೆ (2018/19 ರಲ್ಲಿ 2-1 ಯಶಸ್ಸು). ಸದ್ಯ ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಆಯ್ಕೆಗಾರರು ವಿರಾಟ್ಗೆ ನಾಯಕನ ಜವಾಬ್ದಾರಿ ಹಸ್ತಾಂತರಿಸಲು ದಿಟ್ಟ ನಿರ್ಧಾರ ಕೈಗೊಂಡಿರುವುದಾಗಿ ವರದಿಯೊಂದು ಉಲ್ಲೇಖಿಸಿದೆ,(ಏಜೆನ್ಸೀಸ್).