ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ಆಸ್ಟ್ರೇಲಿಯಾ (Australias) ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿಯ ಕೊನೆ ಪಂದ್ಯದಲ್ಲಿ ಪ್ರವಾಸಿ ತಂಡವು 158 ರನ್ಗಳಿಗೆ ಆಲೌಟ್ ಆಗಿದ್ದು, ಆತಿಥೇಯರಿಗೆ 162ರನ್ಗಳ ಗುರಿಯನ್ನು ನೀಡಲಾಗಿದೆ. ಇನ್ನೂ ಎರಡನೇ ಇನ್ನಿಂಗ್ಸ್ನಲ್ಲಿ ಬಿರುಸಿನ ಆಟವಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ ರಿಷಭ್ ಪಂತ್ ಆಟಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಆರಂಭಿಕ ಬ್ಯಾಟ್ಸ್ಮನ್ಗಳ ಆಟ ತೀವ್ರ ಟೀಕೆಗೆ ಗುರಿಯಾಗಿದೆ.
ಮೆಲ್ಬೋರ್ನ್ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡಿ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದ್ದ ರಿಷಭ್ ಪಂತ್ ಸಿಡ್ನಿ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಹಾಡಿಹೊಗಳಿದ್ದಾರೆ. ಆದರೆ, ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಕೆ.ಎಲ್. ರಾಹುಲ್ ಆಕ್ರಮಣಕಾರಿ ಆಟವಾಡಿದ್ದೆ ತಂಡ (Team India) ಸಂಕಷ್ಟಕ್ಕೆ ಸಿಲುಕಿದೆ ಎಂದು ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ.
ಎರಡನೇ ದಿನದಾಟ ಅಂತ್ಯಗೊಂಡ ಬಳಿಕ ಈ ಬಗ್ಗೆ ಮಾತನಾಡಿದ ಗವಾಸ್ಕರ್, ಪ್ರಾಬಲ್ಯ ಸಾಧಿಸುವ ನಿಟ್ಟಿನಲ್ಲಿ ಟೀಮ್ ಇಂಡಿಯಾ ವಿಕೆಟ್ ಕಳೆದುಕೊಳ್ಳುತ್ತಿರುವುದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದು ಎರಡನೇ ದಿನ. ಇಷ್ಟು ಆತುರವಾಗಿ ರನ್ಗಳಿಸುವ ಆತುರವಾದರೂ ಏನಿದೆ. ಈ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ ಆದರೆ ಆತುರಪಡಬೇಕು ಎಂದಲ್ಲ. ಒಂದು ವೇಳೆ ಪಂದ್ಯವನ್ನು ನಾವು ಸೋತರೆ ಅದಕ್ಕೆ ಈ ಆತುರವೇ ಕಾರಣ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಸಿಡ್ನಿ ಟೆಸ್ಟ್ ಪಂದ್ಯವು ರೋಚಕ ಘಟ್ಟ ತಲುಪಿದ್ದು, ಮೂರನೇ ದಿನದಾಟಕ್ಕೆ ಮ್ಯಾಚ್ ಮುಕ್ತಾಯವಾಗುವುದು ಬಹುತೇಕ ಖಾತ್ರಿಯಾಗಿದೆ. ಮೊದಲ ಇನ್ನಿಂಗ್ಸ್ನಲ್ಲಿ ರನ್ ಗಳಿಸಲು ಪರದಾಡಿದ್ದ ಭಾರತ ತಂಡವು (Team India) ಎರಡನೇ ಇನ್ನಿಂಗ್ಸ್ನಲ್ಲಿ ಆಕ್ರಮಣಕಾರಿ ಆಟಕ್ಕೆ ಹೆಚ್ಚು ಒತ್ತು ನೀಡಿತ್ತು. ಪ್ರಸ್ತುತ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಮಾಡುತ್ತಿದ್ದು, 3 ವಿಕೆಟ್ ನಷ್ಟಕ್ಕೆ 70 ರನ್ಗಳಿಸಿದೆ.