ನವದೆಹಲಿ: ಜೂನ್ 29ರಂದು ಮುಕ್ತಾಯಗೊಂಡ ಟಿ20 ವಿಶ್ವಕಪ್ನಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡ ಟ್ರೋಫಿ ಗೆಲ್ಲುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಮಾದರಿ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಇವರ ನಡೆಗೆ ಕ್ರೀಡಾ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಈ ಕುರಿತು ಮಾತನಾಡಿರುವ 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ವಿರಾಟ್ ಹಾಗೂ ರೋಹಿತ್ರನ್ನು ಹಾಡಿ ಹೊಗಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ ಕಪಿಲ್ ದೇವ್, ಯಾವುದೇ ಸ್ವರೂಪವಾಗಲಿ ವಿರಾಟ್ ಹಾಗೂ ರೋಹಿತ್ ಸ್ಥಾನವನ್ನು ತುಂಬಬಲ್ಲ ಆಟಗಾರರು ಭಾರತ ತಂಡದಲ್ಲಿ ಯಾರಿಂದಲೂ ಸಾಧ್ಯವಿಲ್ಲ. ಇವರಿಬ್ಬರು ಭಾರತೀಯ ಕ್ರಿಕೆಟ್ಗೆ ದೊಡ್ಡ ಆಸ್ತಿಯಾಗಿದ್ದು, ಇವರಿಗೆ ಈ ರೀತಿ ವಿದಾಯ ಸಿಕ್ಕಿರುವುದನ್ನು ನೋಡಲು ಖುಷಿಯಾಗುತ್ತದೆ.
ವಿರಾಟ್ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ತಮ್ಮ ಮಹತ್ವ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಟಿ20 ವಿಚಾರಕ್ಕೆ ಬರುವುದಾದರೆ ಇನ್ನು ಮುಂದೆ ಖಂಡಿತವಾಗಿಯೂ ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಇವರಿಬ್ಬರು ಸಚಿನ್ ಹಾಗೂ ಧೋನಿ ಇದ್ದ ಹಾಗೆ ಇಬ್ಬರ ಸ್ಥಾನವನ್ನು ತುಂಬಲು ಯಾರಿಂದಲೂ ಸಅಧ್ಯವಿಲ್ಲ ಎಂದು 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ವಿರಾಟ್ ಹಾಗೂ ರೋಹಿತ್ರನ್ನು ವಿದಾಯದ ಕುರಿತು ಹೇಳಿದ್ದಾರೆ.