ನವದೆಹಲಿ: ವಿಶ್ವದ ಮಿಲಿಯನ್ ಡಾಲರ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ಗೆ ವರ್ಣರಂಜಿತ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಜೂನ್ 02ರಂದು ಆರಂಭವಾಗಲಿರುವ ಚುಟುಕು ವಿಶ್ವಸಮರದ ಮೇಲೆ ಬಿದ್ದಿದೆ. ಈ ಬಾರಿ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಟಿ-20 ವಿಶ್ವಕಪ್ ನಡೆಯಲಿದ್ದು, ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.
ಈ ಬಾರಿ ಕಪ್ ಗೆಲ್ಲುವ ನಿರೀಕ್ಷೆಯೊಂದಿಗೆ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾಗೆ ಹಲವು ಸವಾಲುಗಳು ಎದುರಾಗಿದ್ದು, ಜೂನ್ 05ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನವನ್ನು ಆರಂಭಿಸಲಿದೆ. ಜೂನ್ 09ರಂದು ನಡೆಯುವ ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ರೀಡಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಪಂದ್ಯದ ದಿನಕ್ಕಾಗಿ ಎದುರು ನೋಡುತ್ತಿದ್ದಾರೆ.
ಇನ್ನೂ ಭಾರತ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಸಮಯದಲ್ಲಿ ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ತಿಳಿಸುವುದು ಮಾಮೂಲು, ಅದೇ ರೀತಿ ಈಗ ಟೀಮ್ ಇಂಡಿಯಾದ ಮಾಜಿ ಆಟಗಾರರೊಬ್ಬರು ಪಂದ್ಯದ ಕುರಿತಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ವಿಶ್ವಕಪ್ ಸಮಯದಲ್ಲಿ ವಿಷಯಗಳು ಬದಲಾಗುತ್ತವೆ ಎಂದು ಹೇಳುವ ಮೂಲಕ ಟೀಮ್ ಇಂಡಿಯಾ ಮಾಜಿ ವೇಗಿ ಆರ್.ಪಿ. ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನವು ಉತ್ತಮ ತಂಡವಾಗಿದ್ದು, ಐರ್ಲೆಂಡ್, ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಸೋತಿದ್ದಾರೆ. ವಿಶ್ವಕಪ್ ಸಮಯದಲ್ಲಿ ವಿಷಯಗಳು ಬದಲಾಗಿರುವುದನ್ನು ನಾವು ಅನೇಕ ಬಾರಿ ನೋಡಿದ್ದೇವೆ. ಅದೇ ರೀತಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ಹೈವೋಲ್ಟೇಜ್ ಆಗಿರುವುದರಿಂದ ಆಟಗಾರರ ಮೇಲೆ ಹೆಚ್ಚಿನ ಒತ್ತ ಇದೆ. 2021ರಲ್ಲಿ ಹೊರತುಪಡಿಸಿದರೆ ಉಳಿದ ಪಂದ್ಯಗಳಲ್ಲಿ ಪಾಕಿಸ್ತಾನದ ವಿರುದ್ಧ ಗೆಲ್ಲುವ ಮೂಲಕ ಉತ್ತಮ ರೆಕಾರ್ಡ್ಅನ್ನು ಹೊಂದಿದೆ. ಹೈವೋಲ್ಟೇಜ್ ಪಂದ್ಯ ಆಗಿರುವುದರಿಂದ ಆಟಗಾರರ ಮೇಲೆ ಒತ್ತಡ ಇರುವುದು ಸಹಜ ಎಂದು ಟೀಮ್ ಇಂಡಿಯಾ ಮಾಜಿ ವೇಗಿ ಆರ್.ಪಿ. ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.