Asia Cup 2025: ಇದೇ ಸೆ.09ರಿಂದ ದುಬೈನಲ್ಲಿ ಆರಂಭಗೊಳ್ಳಲಿರುವ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ವೇಗಿ ಜಸ್ಪ್ರಿತ್ ಬುಮ್ರಾ, ಶುಭಮನ್ ಗಿಲ್, ರಿಂಕು ಸಿಂಗ್ ಸೇರಿದಂತೆ ಹಲವರಿಗೆ ಬಿಸಿಸಿಐ ತಂಡದಲ್ಲಿ ಸ್ಥಾನ ನೀಡಿತು. ಆದರೆ, ಕಳೆದ ಐಪಿಎಲ್ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ಪರ ಅದ್ಭುತ ಇನ್ನಿಂಗ್ಸ್ ಆಡಿದ ಶ್ರೇಯಸ್ ಅಯ್ಯರ್ ಮತ್ತು ಯಶಸ್ವಿ ಜೈಸ್ವಾಲ್ಗೆ ಸ್ಥಾನ ಕೊಡದೆ ಹೋಗಿದ್ದು ಹಲವರ ಅಸಮಾಧಾನಕ್ಕೆ ಕಾರಣವಾಯಿತು. ಸದ್ಯ ಇದೇ ವಿಷಯವನ್ನು ಮುಂದಿಟ್ಟು ಮಾತನಾಡಿರುವ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್, ಬಿಸಿಸಿಐ ಆಯ್ಕೆಗಾರರ ಸಮಿತಿ ವಿರುದ್ಧ ಕಿಡಿಕಾರಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್, ಪ್ರಶಂಸನೀಯ ಇನ್ನಿಂಗ್ಸ್ ಆಡಿದ್ದಾರೆ. ಇಂತಹ ಪ್ರತಿಭೆಯನ್ನು ಏಷ್ಯಾಕಪ್ನಿಂದ ಕೈಬಿಟ್ಟಿರುವುದು ಸರಿಯಾದ ನಿರ್ಧಾರವಲ್ಲ ಎಂದು ಮಾಜಿ ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಜಾಲತಾಣಗಳಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಜಯ್, "ಉಳಿದ ಫಾರ್ಮೆಟ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದರವನ್ನು ಕರೆದುಕೊಳ್ಳುವುದು ಸರಿಯೇ ಹೊರತು ಇನ್ಯಾವುದೋ ಫಾರ್ಮೆಟ್ನಲ್ಲಿ ಆಡಿದವರನಲ್ಲ" ಎಂದು ಟೀಕಿಸಿದ್ದಾರೆ.
"ಕಳೆದ ಕೆಲವು ವರ್ಷಗಳಿಂದ ಇದೊಂದು ಟ್ರೆಂಡ್ ಆಗಿಬಿಟ್ಟಿದೆ. ಅಗತ್ಯವಿರುವ ಫಾರ್ಮೆಟ್ ಬಿಟ್ಟು ಉಳಿದ ಫಾರ್ಮೆಟ್ನಲ್ಲಿ ಯಶಸ್ಸು ಕಂಡ ಆಟಗಾರನಿಗೆ ಅವಕಾಶ ಕೊಡುವ ಪದ್ಧತಿ ಅದ್ಯಾಕೆ ಪಾಲನೆ ಆಗುತ್ತಿದೆ ಎಂಬುದು ನನಗೆ ತಿಳಿಯುತ್ತಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸಿ ನೋಡಿದಾಗ, ಆಯ್ಕೆಯಲ್ಲಿ ಲಾಜಿಕ್ ಇಲ್ಲದಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ" ಎಂದಿದ್ದಾರೆ.
ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಶುಭಮನ್ ಗಿಲ್ (ಉಪನಾಯಕ), ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ರಿಂಕು ಸಿಂಗ್, ಕುಲದೀಪ್ ಯಾದವ್ ಮತ್ತು ಸಂಜು ಸ್ಯಾಮ್ಸನ್.