ಕ್ರೀಡೆ

ಟೆಸ್ಟ್​ ಕ್ರಿಕೆಟ್​ನಲ್ಲಿ ಕಳಪೆ ಫಾರ್ಮ್​; ಇಂಗ್ಲೆಂಡ್​ ವಿರುದ್ಧದ ಸರಣಿಗೂ ಮುನ್ನ ಈ ಕೆಲಸ ಮಾಡಲಿದ್ದಾರಂತೆ Virat Kohli

ಮುಂಬೈ: ಈಚೆಗೆ ಮುಕ್ತಾಯಗೊಂಡ ಬಾರ್ಡರ್​-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್​ ಸರಣಿಯಲ್ಲಿ ಭಾರತ ತಂಡ 1-3 ಅಂತರದಿಂದ ಸೋಲುಂಡಿದ್ದು, ವಿಶ್ವಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಟಿಕೆಟ್​ ಮಿಸ್​ ಮಾಡಿಕೊಂಡಿದೆ. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದ ವಿರಾಟ್​ ಕೊಹ್ಲಿ (Virat Kohli) ಮೊದಲ ಪಂದ್ಯ ಹೊರತುಪಡಿಸಿದರೆ ಉಳಿದ ಮ್ಯಾಚ್​ಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ. ಸರಣಿ ಮುಗಿದ ಬೆನ್ನಲ್ಲೇ ವಿರಾಟ್​ ನಿವೃತ್ತಿ ಪಡೆಯುವಂತೆ ಆಗ್ರಹ ಕೇಳಿ ಬರುತ್ತಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಒಂದು ಶತಕ ಸೇರಿದಂತೆ 190 ರನ್ ಬಾರಿಸಿದ್ದ ವಿರಾಟ್​ ಕ್ರೀಡಾಭಿಮಾನಿಗಳಲ್ಲಿ ಭಾರೀ ನಿರಾಸೆಯನ್ನು ಮೂಡಿಸಿದ್ದರು. ಇದೀಗ ಇಂಗ್ಲೆಂಡ್​ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್​​ ಸರಣಿಗೆ ಸಂಬಂಧಿಸಿದಂತೆ ವಿರಾಟ್​ರನ್ನು (Virat Kohli) ತಂಡದಿಂದ ಕೈ ಬಿಡುವಂತೆ ಆಗ್ರಹ ಕೇಳಿಬರುತ್ತಿರುವ ನಡುವೆಯೇ ವಿರಾಟ್​​ ಕೌಂಟಿ ಕ್ರಿಕೆಟ್​ನಲ್ಲಿ ಆಡಲಿದ್ದಾರೆ ಎಂಬ ಮಾತು ಕ್ರೀಡಾವಲಯದಲ್ಲಿ ಹರಿದಾಡಲು ಶುರುವಾಗಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ವಿರಾಟ್​ (Virat Kohli) ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಗೂ ಮುನ್ನ ತಮ್ಮ ಫಾರ್ಮ್​ಅನ್ನು ಸಾಬೀತುಪಡಿಸಲು ಕೌಂಟಿ ಕ್ರಿಕೆಟ್​ನಲ್ಲಿ ಆಡಲಿದ್ದಾರೆ ಎಂದು ಹೇಳಲಾಗಿದ್ದು, ಇಂಗ್ಲೆಂಡ್​ನ ಪರಿಸ್ಥಿತಿಗೆ ಒಗ್ಗಿಕೊಳ್ಳುವ ಸಲುವಾಗಿ ಈ ರೀತಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಚಾಂಪಿಯನ್ಸ್​ ಟ್ರೋಫಿ ಬಳಿಕ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಚಾಂಪಿಯನ್ಸ್​ ಟ್ರೋಫಿ ಬಳಿಕ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿ ಆರಂಭವಾಗಲಿದ್ದು, ಭಾರತ ತಂಡವನ್ನು ಜನವರಿ 12ಕ್ಕೆ ಪ್ರಕಟಿಸಲಾಗುತ್ತದೆ ಎಂದು ತಿಳಿದು ಬಂದಿದೆ. ವಿರಾಟ್​ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮ ಫಾರ್ಮ್​ ತಂಡದ ಮ್ಯಾನೇಜ್​ಮೆಂಟ್​ಅನ್ನು ಚಿಂತೆಗೆ ದೂಡಿದ್ದು, ಮಾಜಿ ಆಟಗಾರರು ಈ ಇಬ್ಬರಿಗೆ ದೇಶೀಯ ಟೂರ್ನಿಯಲ್ಲಿ ಭಾಗಿಯಾಗುವಂತೆ ಸಲಹೆ ನೀಡುತ್ತಿದ್ದಾರೆ.