ಮುಂಬೈ: ವಿಶ್ವದ ಟಾಪ್ ಮೋಸ್ಟ್ ಬಿಲೇನಿಯರ್ಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹ ಕಾರ್ಯಕ್ರಮವು ಜುಲೈ 12ರಂದು ಮುಂಬೈನಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಒಂದಿಲ್ಲೊಂದು ಕಾರಣಕ್ಕೆ ಮದುವೆ ಕಾರ್ಯಕ್ರಮ ಸದ್ದು ಮಾಡುತ್ತಿದೆ.
ಇತ್ತೀಚಿಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ವಿಶ್ವವಿಜೇತ ತಂಡದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಲ್ವರು ಆಟಗಾರರಿರುವುದು ಮತ್ತಷ್ಟು ವಿಶೇಷವಾಗಿದೆ. ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇವರೆಲ್ಲರೂ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಅನಂತ್-ರಾಧಿಕಾ ವಿವಾಹದ ಪ್ರಯುಕ್ತ ಆಯೋಜಿಸಲಾಗಿದ್ದ ಸಂಗೀತ್ ಕಾರ್ಯಕ್ರಮದಲ್ಲಿ ಇವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಈ ವೇಳೆ ನೀತಾ ಅಂಬಾನಿ ಭಾವುಕರಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಂಗೀತ್ ಕಾರ್ಯಕ್ರಮದಲ್ಲಿ ಮಾತನಾಡಿದ ನೀತಾ, ನಾವೆಲ್ಲರೂ ಇಲ್ಲಿ ಒಂದು ಕುಟುಂಬವಾಗಿ ಸೇರಿದ್ದೇವೆ. ಇದರ ಹೊರತಾಗಿ ನನಗೆ ಇನ್ನೊಂದು ಕುಟುಂಬವಿದೆ. ಆ ಕುಟುಂಬ ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡಿದೆ. ಅದು ಎಂತಹ ಅಗಾಧ ಭಾವನೆ ಎಂದು ನಾನು ಹೇಳಲಾರೆ. ವಿಶ್ವಕಪ್ ವಿಜೇತರ ತಂಡದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಿರುವುದು ಸಂಭ್ರಮವನ್ನು ಡಬಲ್ ಮಾಡಿದೆ. ಅನಂತ್-ರಾಧಿಕಾಗಾಗಿ ಆಯೋಜಿಸಿರುವ ಸಂಗೀತ್ ಸಂಜೆಯಲ್ಲಿ ನಾವು ಭಾರತದ ಗೆಲುವನ್ನು ಆಚರಿಸೋಣ ಎಂದು ನೀತಾ ಅಂಬಾನಿ ಹೇಳಿದ್ದಾರೆ.
ಈ ವೇಳೆ ಆಟಗಾರರನ್ನು ವೇದಿಕೆ ಮೇಲೆ ಕರೆದಾಗ ನೀತಾ ಅಂಬಾನಿ ಭಾವುಕರಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದಕ್ಕೆ ಅಂಬಾನಿ ಕುಟುಂಬವು ಈ ನಾಲ್ವರು ಆಟಗಾರರಿಗೆ ವಿಶೇಷವಾಗಿ ಧನ್ಯವಾದಗಳನ್ನು ತಿಳಿಸಿದೆ. ಕಾರ್ಯಕ್ರಮದಲ್ಲಿ ಬಾಲಿವುಡ್, ಭಾರತ ಕ್ರಿಕೆಟ್ ತಂಡದ ಮಾಜಿ ಹಾಗೂ ಹಾಲಿ ಆಟಗಾರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಶ್ವದ ಟಾಪ್ ಮೋಸ್ಟ್ ಬಿಲೇನಿಯರ್ಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವಿವಾಹ ಕಾರ್ಯಕ್ರಮವು ಜುಲೈ 12ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬೈ ನಗರದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಕಾರ್ಡ್ ಆಗಿರುವ ‘ಸೇವ್ ದಿ ಡೇಟ್’ ಆಮಂತ್ರಣ ಪತ್ರಿಕೆಯನ್ನು ಅತಿಥಿಗಳು ಸ್ವೀಕರಿಸುತ್ತಿದ್ದಾರೆ.