ನವದೆಹಲಿ: ಟೀಮ್ ಇಂಡಿಯಾದ ಮಾಜಿ ನಾಯಕ, ರನ್ ಮೆಷಿನ್, ಚೇಸಿಂಗ್ ಕಿಂಗ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದರೆ ತಪ್ಪಾಗಲಾರದು. 2008ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವಿರಾಟ್ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕವೇ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ರಾಷ್ಟ್ರೀಯ ತಂಡದ ಹೊರತಾಗಿ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ವಿರಾಟ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.
2008ರಲ್ಲಿ 19 ವರ್ಷದ ಯುವ ಬ್ಯಾಟ್ಸ್ಮನ್ ಆಗಿ ಅವರು ಭಾರತ ತಂಡದ ಪರ ಪದಾರ್ಪಣೆ ಮಾಡಿದ್ದರು. ಕಳೆದ 16 ವರ್ಷಗಳಲ್ಲಿ ಭಾರತ ತಂಡದ ಪರ ಮೂರೂ ಪ್ರಕಾರಗಳಲ್ಲಿ ಒಟ್ಟು 533 ಪಂದ್ಯ ಆಡಿರುವ ಕೊಹ್ಲಿ, ಸುಮಾರು 27 ಸಾವಿರ ರನ್ ಬಾರಿಸಿದ್ದಾರೆ. ಹಲವರುಇ ದಾಖಲೆಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ತಮ್ಮ ಬದ್ಧವೈರಿ ತಂಡದ ಹೆಸರನ್ನು ಹೇಳಿದ್ದು, ಈ ಸುದ್ದಿ ಸಖತ್ ಸೌಂಡ್ ಮಾಡುತ್ತಿದೆ.
ಈ ಹಿಂದೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಆ್ಯಂಕರ್ ವಿರಾಟ್ಗೆ ಐಪಿಎಲ್ನಲ್ಲಿ ಯಾವ ತಂಡವನ್ನು ನೀವು ವೈರಿಗಳಂತೆ ಕಾಣುತ್ತೀರಾ ಎಂದು ಮುಂಬೈ ಅಥವಾ ಕಲ್ಕತ್ತಾನಾ ಎಂದು ಪ್ರಶ್ನಿಸಿದ್ದಾರ. ಇದಕ್ಕೆ ನಗುತ್ತಲೇ ಉತ್ತರಿಸಿದ ವಿರಾಟ್ ಮೂರು ಬಾರಿಯ ಚಾಂಪಿಯನ್ಸ್ ಕಲ್ಕತ್ತಾ ನೈಟ್ರೈಡರ್ಸ್ ತಂಡದ ಹೆಸರನ್ನು ಹೇಳಿದ್ದಾರೆ. ಆದರೆ, ಕಾರಣವನ್ನು ಉಲ್ಲೇಖಿಸಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿರಾಟ್ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಪ್ರಸ್ತುತು ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಗೌತಮ್ ಗಂಭೀರ್ ಅವರೊಟ್ಟಿಗೆ 31.80 ರ ಸರಾಸರಿಯಲ್ಲಿ 159 ರನ್ ಗಳಿಸಿದ್ದರು. ಆ ಬಳಿಕ ವಿರಾಟ್ ಭಾರತ ತಂಡಕ್ಕೆ ಅಸಾಧಾರಣ ಬ್ಯಾಟಿಂಗ್ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.