ಮುಂಬೈ: ಸೆಪ್ಟೆಂಬರ್ 19ರಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಟಾರ್ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ರಿಷಭ್ ಪಂತ್ ತಂಡಕ್ಕೆ ವಾಪಸ್ ಆಗಿದ್ದು, ಐಪಿಎಲ್ನಲ್ಲಿ ಆರ್ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ವೇಗಿ ಯಶ್ ದಯಾಳ್ಗೆ ರಾಷ್ಟ್ರೀಯ ತಂಡದಿಂದ ಇದೇ ಮೊದಲ ಬಾರಿಗೆ ಕರೆ ಬಂದಿದೆ. ಆದರೆ, ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕ್ರೀಡಾಭಿಮಾನಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಬಾಂಗ್ಲಾ ವಿರುದ್ಧದ ಸರಣಿಗೆ ತಂಡ ಪ್ರಕಟಿಸುತ್ತಿದ್ದಂತೆ ಹಲವರು ಶಮಿ ಹಾಗೂ ಅಯ್ಯರ್ರನ್ನು ಏಕೆ ಆಯ್ಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದರು. ಹಾಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಯಾಕೆ ಅವರನ್ನು ಆಯ್ಕೆ ಮಾಡಿಲ್ಲ ಎಂದು ಕ್ರೀಡಾಭಿಮಾನಿಗಳು ಬಿಸಿಸಿಐ ನಡೆಗೆ ಕಿಡಿಕಾರಿದ್ದರು. ಏಕೆಂದರೆ ಈ ಇಬ್ಬರು ಆಟಗಾರರು ಹಾಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದರ ಹೊರತಾಗಿಯೂ ಅವರನ್ನು ಆಯ್ಕೆ ಮಾಡದಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಈ ಕುರಿತು ಮಾತನಾಡಿರುವ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಯುವ ಸಂಸದೆಯನ್ನು ಮದುವೆಯಾಗಲಿದ್ದಾರೆ ರಾಗಾ; ವೈರಲ್ ಆಗುತ್ತಿದೆ ಇವರಿಬ್ಬರ ಫೋಟೋಸ್
ಈ ಕುರಿತು ಮಾತನಾಡಿರುವ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, ರೆಡ್ಬಾಲ್ ಕ್ರಿಕೆಟ್ನಲ್ಲಿ ಶ್ರೇಯಸ್ ಅಯ್ಯರ್ ಅವರ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಹಾಗೂ 2024ರಲ್ಲಿ ಅವರ ಫಾರ್ಮ್ಅನ್ನು ನೋಡಿಕೊಂಡು ಬಾಂಗ್ಲಾ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಿಲ್ಲ. ಮಧ್ಯಮ ಕ್ರಮಾಂಕದ ಸ್ಥಾನಗಳಿಗಾಗಿ ಸರ್ಫರಾಜ್ ಖಾನ್ ಮತ್ತು ಕೆಎಲ್ ರಾಹುಲ್ ಅವರಂತಹವರು ಸಹ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಆಯ್ಯರ್ರನ್ನು ಆಯ್ಕೆ ಮಾಡಲಾಗಿಲ್ಲ.
ಮೊಹಮ್ಮದ್ ಶಮಿ ಪ್ರಕರಣ ಬೇರೆಯದೇ ಆಗಿದೆ. ಅನುಭವಿ ವೇಗಿ ಬಾಂಗ್ಲಾದೇಶ ಸರಣಿಗೆ ಮರಳಬಹುದು ಎಂದು ನಾವು ಭಾವಿಸಿದ್ದೆವು. ಆದರೆ, ಫಿಟ್ನೆಸ್ ಕಾರಣದಿಂದಾಗಿ ಆವರನ್ನು ಆಯ್ಕೆ ಮಾಡಲಾಗಿಲ್ಲ. ಶಮಿ ತಮ್ಮ ಫಿಟ್ನೆಸ್ಅನ್ನು ಸಾಬೀತುಪಡಿಸಿದರೆ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳುವುದಂತು ನಿಶ್ಚಿತ. ನನ್ನ ಪ್ರಕಾರ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಶಮಿ ಆಯ್ಕೆಯಾಗುವುದು ಡೌಟ್ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.