ನವದೆಹಲಿ: ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ನ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಬಹು ನಿರೀಕ್ಷಿತ ಟೂರ್ನಿಯು ಫೆಬ್ರವರಿ 23ರಿಂದ ಅಭಿಯಾನ ಆಂರಭವಾಗಲಿದ್ದು, ಮಾರ್ಚ್ 17ರಂದು ಫಿನಾಲೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಸಿಸಿಐ ಈ ಬಾರಿಯ ಟೂರ್ನಿ ಎರಡು ನಗರಗಳಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಫಿನಾಲೆ ಸೇರಿದಂತೆ ಎರಡನೇ ಹಂತದ ಪಂದ್ಯಗಳಿಗೆ ನವದೆಹಲಿಯಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನ ಎರಡನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಭಿಯಾನವನ್ನು ಫೆಬ್ರವರಿ 24ರಂದು ಆರಂಭಿಸಲಿದ್ದು, ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ.
ವೇಳಾಪಟ್ಟಿ ಹೀಗಿದೆ:
- ಫೆಬ್ರವರಿ 23- ಬೆಂಗಳೂರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್
- ಫೆಬ್ರವರಿ 24- ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್
- ಫೆಬ್ರವರಿ 25- ಬೆಂಗಳೂರಿನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್
- ಫೆಬ್ರವರಿ 26 - ಬೆಂಗಳೂರಿನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್
- ಫೆಬ್ರವರಿ 27 - ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್
- ಫೆಬ್ರವರಿ 28 - ಬೆಂಗಳೂರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್
- ಫೆಬ್ರವರಿ 29 - ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್
- ಮಾರ್ಚ್ 1 - ಬೆಂಗಳೂರಿನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್
- ಮಾರ್ಚ್ 2 - ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
- ಮಾರ್ಚ್ 3 - ಬೆಂಗಳೂರಿನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್
- ಮಾರ್ಚ್ 4 - ಬೆಂಗಳೂರಿನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಮಾರ್ಚ್ 5 - ದೆಹಲಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್
- ಮಾರ್ಚ್ 6 - ದೆಹಲಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಮಾರ್ಚ್ 7 - ದೆಹಲಿಯಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್
- ಮಾರ್ಚ್ 8 - ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್
- ಮಾರ್ಚ್ 9 - ದೆಹಲಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್
- ಮಾರ್ಚ್ 10 - ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಮಾರ್ಚ್ 11 - ದೆಹಲಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್
- ಮಾರ್ಚ್ 12 - ದೆಹಲಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು
- ಮಾರ್ಚ್ 13 - ದೆಹಲಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್
- ಮಾರ್ಚ್ 15 - ದೆಹಲಿಯಲ್ಲಿ ಎಲಿಮಿನೇಟರ್
- ಮಾರ್ಚ್ 17 - ದೆಹಲಿಯಲ್ಲಿ ಫೈನಲ್