ಕ್ರೀಡೆ

ಆಂಗ್ಲರ ವಿರುದ್ಧ ಶತಕ ಸಿಡಿಸಿ ಹೊಸ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಎರಡನೇ ಟೆಸ್ಟ್​ ಪಂದ್ಯದಲ್ಲಿ ಆರಂಭಿಕ ಯಶಸ್ವಿ ಜೈಸ್ವಾಲ್​ ತಮ್ಮ ಟೆಸ್ಟ್ ಬದುಕಿನ ಎರಡನೇ ಶತಕ ಸಿಡಿಸಿ ಮಿಂಚುವ ಮೂಲಕ ಹೊಸ ದಾಖಲೆ ಒಂದನ್ನು ಬರೆದಿದ್ದಾರೆ.

ಭಾರತದ ನೆಲದಲ್ಲಿ ಚೊಚ್ಚಲ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್​ ತಾಳ್ಮೆಯ ಆಟವಾಡುವ ಮೂಲಕ ಟೀಂ ಇಂಡಿಯಾವನ್ನು ಏಕಾಂಗಿಯಾಗಿ 200ರ ಗಡಿ ದಾಟಿಸಿದ್ದಾರೆ. ಪ್ರವಾಸಿ ತಂಡಕ್ಕೆ ತಲೆನೋವಾಗಿ ಪರಿಣಮಿಸಿರುವ ಯಶಸ್ವಿ ಜೈಸ್ವಾಲ್​ 16 ಬೌಂಡರಿ, 4 ಸಿಕ್ಸರ್​ ಸಮೇತ 151 ರನ್​ ಗಳಿಸಿ ತಂಡಕ್ಕೆ ಆಸರೆಯಾಗಿದ್ದಾರೆ.

ಭಾರತದ ನೆಲದಲ್ಲಿ ಚೊಚ್ಚಲ ಶತಕ ಸಿಡಿಸುವ ಮೂಲಕ ಕ್ರಿಕೆಟ್​ನಲ್ಲಿ ಯಶಸ್ವಿ ಜೈಸ್ವಾಲ್​ 1000 ರನ್​ ಪೂರೈಸಿದ್ದಾರೆ. ಇದಕ್ಕೂ ಮುನ್ನ ಭಅರತದ ಪರತ 17 ಟಿ-20, 5 ಟೆಸ್ಟ್ ಪಂದ್ಯಗಳನ್ನು ಆಡಿರುವ ಜೈಸ್ವಾಲ್​ 913 ರನ್​ ಗಳಿಸಿದ್ದರು. ಪ್ರವಾಸಿ ಇಂಗ್ಲೆಂಡ್​ ತಂಡದ ವಿರುದ್ಧ ಶತಕ ಸಿಡಿಸುವ ಮೂಲಕ ತಮ್ಮ ಟೆಸ್ಟ್​ ರನ್​ಗಳನ್ನು 500ರ ಗಡಿ ದಾಟಿಸಿದ್ದಾರೆ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 1000 ರನ್​ ಗಳಿಸಿದ್ದಾರೆ.

ಯಶಸ್ವಿ ಜೈಸ್ವಾಲ್ ಅವರ ಈ ಶತಕದ ವಿಶೇಷವೆಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಟೆಸ್ಟ್ ಸರಣಿಯಲ್ಲಿ ಇದು ಟೀಂ ಇಂಡಿಯಾದಿಂದ ಮೊದಲ ಶತಕವಾಗಿದೆ. ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್, ರವೀಂದ್ರ ಜಡೇಜಾ ಮತ್ತು ಯಶಸ್ವಿ ಜೈಸ್ವಾಲ್ 70ಕ್ಕೂ ಹೆಚ್ಚು ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು, ಆದರೆ ಯಾರೊಬ್ಬರಿಗೂ ಶತಕ ಪೂರೈಸಲು ಸಾಧ್ಯವಾಗಿರಲಿಲ್ಲ.