ಕೆಐಎಡಿಬಿಗೆ 2 ಕೋಟಿ ರೂ ಲಾಭಾಂಶದ ಚೆಕ್​ ಅನ್ನು ಸಿಎಂ ಪರಿಹಾರ ನಿಧಿಗೆ ಹಸ್ತಾಂತರ ಮಾಡಲಾಯಿತು 
ವೆಬ್‌ಡೆಸ್ಕ್

ಕೆಐಎಡಿಬಿಗೆ 2 ಕೋಟಿ ರೂ ಲಾಭಾಂಶ: ಸಿಎಂ ಪರಿಹಾರ ನಿಧಿಗೆ ಹಸ್ತಾಂತರ | KIADB

ಬೆಂಗಳೂರು: ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕೆಐಎಡಿಬಿಯ 2 ಕೋಟಿ ರೂ. ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಶುಕ್ರವಾರ ಹಸ್ತಾಂತರಿಸಿದರು.
ಈ ವೇಳೆ ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ ಮೆಂಟ್ ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ.