Tambuli Recipe ಸಾಂದರ್ಭಿಕ ಚಿತ್ರ
Tambuli Recipe: ತಂಬುಳಿ ಎನ್ನುವುದು ಮಲೆನಾಡು ಮತ್ತು ಕರಾವಳಿ ಭಾಗದ ಅತ್ಯಂತ ಜನಪ್ರಿಯ ಹಾಗೂ ಆರೋಗ್ಯಕರವಾದ ಖಾದ್ಯ. ಇದು ದೇಹವನ್ನು ತಂಪು ಮಾಡುವುದಲ್ಲದೆ, ಜೀರ್ಣಕ್ರಿಯೆಗೂ ಬಹಳ ಉತ್ತಮ. ಇಲ್ಲಿ ಅತ್ಯಂತ ಸುಲಭವಾಗಿ ಮಾಡಬಹುದಾದ 'ಜೀರಿಗೆ ತಂಬುಳಿ' ರೆಸಿಪಿ ಇಲ್ಲಿದೆ ನೋಡಿ..
ಬೇಕಾಗುವ ಪದಾರ್ಥಗಳು
* 2 ಕಪ್ ಮೊಸರು ಅಥವಾ ಮಜ್ಜಿಗೆ
* ಒಗ್ಗರಣೆಗೆ: ಸಾಸಿವೆ, ಜೀರಿಗೆ, ಕರಿಬೇವು, ಕೆಂಪು ಮೆಣಸಿನಕಾಯಿ.
ಮಾಡುವ ವಿಧಾನ
ಮೊದಲು ಒಂದು ಸಣ್ಣ ಬಾಣಲೆಯಲ್ಲಿ ಸ್ವಲ್ಪ ತುಪ್ಪ ಹಾಕಿ ಜೀರಿಗೆ, ಕರಿಮೆಣಸು ಮತ್ತು ಹಸಿಮೆಣಸಿನಕಾಯಿಯನ್ನು ಸಣ್ಣ ಉರಿಯಲ್ಲಿ ಪರಿಮಳ ಬರುವವರೆಗೆ ಹುರಿದುಕೊಳ್ಳಿ. ನಂತರ ಹುರಿದ ಪದಾರ್ಥಗಳನ್ನು ತುರಿದ ತೆಂಗಿನಕಾಯಿಯೊಂದಿಗೆ ಸೇರಿಸಿ, ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.
ರುಬ್ಬಿದ ಈ ಮಿಶ್ರಣವನ್ನು ಒಂದು ಪಾತ್ರೆಗೆ ಹಾಕಿ, ಅದಕ್ಕೆ ಮೊಸರು ಅಥವಾ ಮಜ್ಜಿಗೆಯನ್ನು ಸೇರಿಸಿ ಅದಕ್ಕೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಒಂದು ಸಣ್ಣ ಚಮಚ ತುಪ್ಪದಲ್ಲಿ ಸಾಸಿವೆ, ಜೀರಿಗೆ, ಕರಿಬೇವು ಮತ್ತು ಒಣ ಮೆಣಸಿನಕಾಯಿ ಹಾಕಿ ಒಗ್ಗರಣೆ ಸಿದ್ಧಪಡಿಸಿ ತಂಬುಳಿಗೆ ಸೇರಿಸಿ. ನಂತರ ಅನ್ನದೊಂದಿಗೆ ಸೇವಿಸಿರಿ (ಏಜೆನ್ಸೀಸ್).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.