ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ನೀಡಿರುವ ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನವು ಬೆಳಗ್ಗೆ ಸುಮಾರು 8.45ರ ಹೊತ್ತಿಗೆ ತಾಂತ್ರಿಕ ದೋಷಗಳನ್ನು ಎದುರಿಸಿತು. ಈ ವೇಳೆ ಪೈಲಟ್, ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ಮುಂದಾದರು. ಆದರೆ, ವಿಮಾನವು ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡಿತು. ಇದರಿಂದ ರನ್ವೇಗೆ ವಿಮಾನ ಅಪ್ಪಳಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿತು.