ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯವಾಗಿ ನಿರ್ಮಾಣವಾಗಿರುವ ರಾಮ ಮಂದಿರದ "ಧ್ವಜಾರೋಹಣ" ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜ ಹಾರಿಸಿದರು.
ಭರಪೂರ ಸ್ವಾಗತ
ಧ್ವಜಾರೋಹಣ ಸಮಾರಂಭ ಹಿನ್ನೆಲೆಯಲ್ಲಿ ಅಯೋಧ್ಯೆ ನಗರ ಮದವಣಗಿತ್ತಿಯಂತೆ ಸಿಂಗಾರಗೊಂಡಿದೆ. ರಸ್ತೆಗಳನ್ನು ಸ್ವಚ್ಛಗೊಳಿಸಲಾಗಿದ್ದು, ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದೆ.
ನಗುಮೊಗದ ರಾಮಲಲ್ಲಾ
2024, ಜನವರಿ 22ರಂದು ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪಿಸಲಾಗಿತ್ತು. ಇಂದು ಅಸಂಖ್ಯಾತ ಭಕ್ತರ ನಂಬಿಕೆಯ ಕ್ಷೇತ್ರವಾಗಿದೆ.
ಭಕ್ತಿಯ ವಂದನೆ
ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು.
ಹಿಂದುಗಳ ಹೆಮ್ಮೆಯ ಪ್ರತೀಕ
ಶತಮಾನಗಳಷ್ಟು ಹಳೆಯದಾದ ಗಾಯಗಳು ಇಂದು ವಾಸಿಯಾಗುತ್ತಿವೆ. ಶತಮಾನಗಳಷ್ಟು ಹಳೆಯದಾದ ನೋವು ಇಂದು ಮಾಯವಾಗುತ್ತಿವೆ. ಎಂದು ಮೋದಿ ಸ್ಮರಿಸಿದರು.