ನಾವು ಆರೋಗ್ಯವಾಗಿ ಇರಬೇಕಾದ್ರೆ ನಮ್ಮ ದೇಹದಲ್ಲಿ ಹರಿದಾಡುವ ರಕ್ತ ಸರಾಗವಾಗಿ ಹರಿಯಬೇಕು. ಯಾವುದೇ ಅಡೆತಡೆ ಎದುರಾದ್ರೂ ಸಮಸ್ಯೆ ತಪ್ಪಿದ್ದಲ್ಲ. ಹೀಗಾಗಿ ಈ ಹಣ್ಣುಗಳನ್ನು ತಿನ್ನುವುದರಿಂದ ನಿಮ್ಮ ರಕ್ತ ಪರಿಚಲನೆ ಸುಧಾರಿಸುತ್ತದೆ.
ದಾಳಿಂಬೆ
ನೋಡಲು ಆಕರ್ಷಕವಾಗಿರುವ ದಾಳಿಂಬೆ ಹಣ್ಣು ಆ್ಯಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ. ಈ ಹಣ್ಣಿನಲ್ಲಿರುವ ನೈಟ್ರೇಟ್‌ಗಳು ರಕ್ತನಾಳಗಳನ್ನು ಹಿಗ್ಗಿಸಲು ಮತ್ತು ರಕ್ತದ ಹರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಬೆರ್ರಿಗಳು
ಸ್ಟ್ರಾಬೆರಿ, ಬ್ಲೂಬೆರಿ ಹಾಗೂ ರಾಸ್ಪ್ಬೆರಿ ಇತ್ಯಾದಿ ಹಣ್ಣುಗಳು ಅತ್ಯಧಿಕ ಫ್ಲೇವನಾಯ್ಡ್‌ಗಳನ್ನು ಹೊಂದಿರುತ್ತವೆ. ಈ ಫ್ಲೇವನಾಯ್ಡ್‌ಗಳು ರಕ್ತನಾಳಗಳ ಗೋಡೆಗಳನ್ನು ಬಲಪಡಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇದರಿಂದ ರಕ್ತ ಪರಿಚಲನೆ ಉತ್ತಮವಾಗಿರುತ್ತದೆ.
ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನಿಂಬೆ ಹಾಗೂ ದ್ರಾಕ್ಷಿಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ಫ್ಲೇವನಾಯ್ಡ್‌ಗಳು ಸಮೃದ್ಧವಾಗಿವೆ. ಇದು ರಕ್ತನಾಳಗಳಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ರಕ್ತ ಹೆಪ್ಪುಗಟ್ಟುವಿಕೆ ತಡೆಯಲು ಸಹಾಯ ಮಾಡುತ್ತದೆ.
ಕಲ್ಲಂಗಡಿ
ಕಲ್ಲಂಗಡಿಯಲ್ಲಿ ಎಲ್-ಸಿಟ್ರುಲಿನ್ ಎಂಬ ಅಮೈನೋ ಆಮ್ಲವಿದೆ. ಈ ಅಂಶವು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತನಾಳಗಳನ್ನು ವಿಶ್ರಾಂತಗೊಳಿಸಿ ರಕ್ತದ ಹರಿವನ್ನು ಸುಧಾರಿಸುತ್ತದೆ.
ಬಾಳೆಹಣ್ಣು
ಬಡವರ ಕೈಗೆ ಸುಲಭವಾಗಿ ಎಟಕುವ ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಂ ಅಧಿಕವಾಗಿದೆ. ಈ ಪೊಟ್ಯಾಸಿಯಂ ರಕ್ತದೊತ್ತಡವನ್ನು ಸಮತೋಲನಗೊಳಿಸಲು ಮತ್ತು ರಕ್ತನಾಳಗಳಲ್ಲಿನ ಒತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಆರೋಗ್ಯಕರ ರಕ್ತ ಪರಿಚಲನೆಗೆ ಅವಶ್ಯಕ.
ಅವಕಾಡೋ
ಅವಕಾಡೋ ಯಾವುದೇ ರುಚಿಯನ್ನು ಹೊಂದಿಲ್ಲದಿದ್ದರೂ ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಇದು ಒಮೆಗಾ-3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದ್ದು, ಹೃದಯ ಮತ್ತು ರಕ್ತನಾಳಗಳ ಆರೋಗ್ಯಕ್ಕೆ ಉತ್ತಮವಾಗಿದೆ.
ಗಮನಿಸಿ
ಈ ಹಣ್ಣುಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸುವುದರ ಜೊತೆಗೆ, ಸಾಕಷ್ಟು ನೀರು ಕುಡಿಯುವುದು ಮತ್ತು ನಿಯಮಿತ ವ್ಯಾಯಾಮ ಮಾಡುವುದೂ ಕೂಡ ಉತ್ತಮ ರಕ್ತ ಪರಿಚಲನೆಗೆ ಬಹಳ ಮುಖ್ಯ.