ಫಿಲ್ಮ್‌ಫೇರ್ ಪ್ರಶಸ್ತಿಗಳ ದಾಖಲೆ
ಅತ್ಯುತ್ತಮ ನಟಿ ವಿಭಾಗದಲ್ಲಿ ಗರಿಷ್ಠ (5 ಬಾರಿ) ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಗೆದ್ದ ಅಪರೂಪದ ದಾಖಲೆ ಕಾಜೋಲ್ ಅವರ ಹೆಸರಿನಲ್ಲಿದೆ. ಈ ದಾಖಲೆಯನ್ನು ಇವರು ತಮ್ಮ ಚಿಕ್ಕಮ್ಮ ನೂತನ್ ಅವರೊಂದಿಗೆ ಹಂಚಿಕೊಂಡಿದ್ದಾರೆ. 'ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ', 'ಕುಚ್ ಕುಚ್ ಹೋತಾ ಹೈ', 'ಕಭಿ ಖುಷಿ ಕಭಿ ಗಮ್', 'ಫನಾ' ಮತ್ತು 'ಮೈ ನೇಮ್ ಈಸ್ ಖಾನ್' ಸಿನಿಮಾಗಳಿಗೆ ಇವರಿಗೆ ಈ ಪ್ರಶಸ್ತಿ ದೊರೆತಿದೆ.