ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅದ್ಭುತವಾಗಿ ಆಡಿ ವಿಜೇತರಾಗಿ ಹೊರಹೊಮ್ಮಿದ ಗಿಲ್ಲಿ ನಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗಿಲ್ಲಿಗೆ ಸಿಎಂ ಹಾರ ಹಾಕಿ ಗೌರವಿಸಿದರು
ಬಿಗ್ ಬಾಸ್ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಗಿಲ್ಲಿಗೆ ಸಿಎಂ ಹಾರ ಹಾಕಿ ಗೌರವಿಸಿದರು.
ಗಿಲ್ಲಿ ನಟ ಸಾಧನೆಯನ್ನು ಮೆಚ್ಚಿದ ಸಿದ್ದರಾಮಯ್ಯ
ಗಿಲ್ಲಿ ನಟ ಸಾಧನೆಯನ್ನು ಮೆಚ್ಚಿದ ಸಿದ್ದರಾಮಯ್ಯ ಅವರಿಗೆ ಹಸ್ತಲಾಘವ ಮಾಡಿ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಸಾಮಾನ್ಯ ಕುಟುಂಬದಿಂದ ಬಂದು ಈ ಮಟ್ಟದ ಜನಪ್ರಿಯತೆ ಗಳಿಸಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು ಎನ್ನಲಾಗಿದೆ.
ಸಂತಸ ವ್ಯಕ್ತಪಡಿಸಿದ ಗಿಲ್ಲಿ
ಈ ಭೇಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು ನನ್ನ ಪಾಲಿನ ಹೆಮ್ಮೆಯ ಕ್ಷಣ ಎಂದು ಗಿಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಯಾರು ಈ ಗಿಲ್ಲಿ ನಟ
'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ಮೂಲಕ ಮನೆಮಾತಾದ ಗಿಲ್ಲಿ ನಟ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಸೀಸನ್ 12ರಲ್ಲಿ ತಮ್ಮ ಹಾಸ್ಯ ಪ್ರಜ್ಞೆ ಮತ್ತು ನೇರ ನುಡಿಯ ಮೂಲಕ ಕನ್ನಡಿಗರ ಮನಗೆದ್ದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಗಿಲ್ಲಿ ನಟನ ಸರಳತೆಗೆ ಅಭಿಮಾನಿಗಳು ಫಿದಾ
ಬಿಗ್ ಬಾಸ್ ಕನ್ನಡ 12ರ ವಿನ್ನರ್ ಗಿಲ್ಲಿ ನಟ ಗಿಚ್ಚಿ ಗಿಲಿಗಿಲಿ ಶೋದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.