ಪ್ರಕೃತಿಯಲ್ಲಿ ಹೇರಳವಾಗಿ ದೊರೆಯುವ ಬೆಟ್ಟದ ನೆಲ್ಲಿಕಾಯಿಯನ್ನು ಆರೋಗ್ಯದ ಕಣಜ ಎಂದರೆ ತಪ್ಪಾಗಲಾರದು. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.
ಆರೋಗ್ಯ ಲಾಭಗಳು
ಬೆಟ್ಟದ ನೆಲ್ಲಿಕಾಯಿಯನ್ನು ನೇರವಾಗಿ, ಜ್ಯೂಸ್ ಅಥವಾ ಪುಡಿ ಮಾಡಿ ತಿನ್ನಬಹುದು. ಇದು ರೋಗನಿರೋಧಕ ಶಕ್ತಿ, ಜೀರ್ಣಕ್ರಿಯೆ, ಚರ್ಮ ಮತ್ತು ಕೂದಲಿನ ಆರೋಗ್ಯ, ಹೃದಯ, ಯಕೃತ್ತು, ದೃಷ್ಟಿ, ರಕ್ತಹೀನತೆ, ಮಧುಮೇಹ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.
ಕೂದಲು ಬೆಳವಣಿಗೆ
ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸಲು ಬೆಟ್ಟದ ನೆಲ್ಲಿಕಾಯಿ ಸಹಕಾರಿಯಾಗಿದೆ.
ಚರ್ಮದ ಆರೈಕೆ
ಬೆಟ್ಟದ ನೆಲ್ಲಿಕಾಯಿಯಲ್ಲಿರುವ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ
ನಿರ್ವಿಶೀಕರಣ
ಯಕೃತ್ತಿನ ಆರೋಗ್ಯವನ್ನು ಉತ್ತೇಜಿಸುವಲ್ಲಿ ಮತ್ತು ನಿರ್ವಿಶೀಕರಣದಲ್ಲಿ ಸಹಾಯ ಮಾಡುವಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು ಪ್ರಮುಖ ಪಾತ್ರ ವಹಿಸುತ್ತದೆ.
ಉರಿಯೂತ ನಿವಾರಣೆ
ಬೆಟ್ಟಿದ ನೆಲ್ಲಿಕಾಯಿಯು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳನ್ನು ತಡೆಯುತ್ತದೆ.
ಹೃದಯದ ಆರೋಗ್ಯ
ಹೃದಯದ ಆರೋಗ್ಯ ರಕ್ಷಿಸುವ ಉತ್ಕರ್ಷಣ ನಿರೋಧಕಗಳು ಬೆಟ್ಟದ ನೆಲ್ಲಿಕಾಯಿಯಲ್ಲಿ ಸಮೃದ್ಧವಾಗಿದ್ದು, ನಿಯಮಿತವಾಗಿ ಸೇವಿಸುವುದನ್ನು ತಪ್ಪಿಸಬೇಡಿ.
ದೃಷ್ಟಿ ಸುಧಾರಣೆ
ದೃಷ್ಟಿ ಸುಧಾರಿಸಲು ಸಹಾಯ ಮಾಡುವ ಪೋಷಕಾಂಶಗಳನ್ನು ಬೆಟ್ಟದ ನೆಲ್ಲಿಕಾಯಿ ಒದಗಿಸುತ್ತದೆ.
ಸಕ್ಕರೆ ಮಟ್ಟ ನಿಯಂತ್ರಣ
ಬೆಟ್ಟದ ನೆಲ್ಲಿಕಾಯಿಯನ್ನು ನಿಯಮಿತವಾಗಿ ಸೇವನೆ ಮಾಡಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಸಮಸ್ಯೆ
ದೇಹದಲ್ಲಿ ಜೀರ್ಣಕ್ರಿಯೆ ಮತ್ತು ಮಲಬದ್ಧತೆ ಸಮಸ್ಯೆ ಏನಾದರೂ ಇದ್ದರೆ ಬೆಟ್ಟದ ನೆಲ್ಲಿಕಾಯಿ ಅದಕ್ಕೆ ರಾಮಬಾಣವಾಗಿದೆ.
ರೋಗ ನಿರೋಧಕ ಶಕ್ತಿ
ನಿಯಮಿತವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ಸೇವನೆ ಮಾಡಿದರೆ ಅದರಲ್ಲಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ರಕ್ತಹೀನತೆ
ಬೆಟ್ಟದ ನೆಲ್ಲಿಕಾಯಿಯನ್ನು ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಲು ಹಾಗೂ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ.