ಭಾರತದ ಸುಪ್ರೀಂಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯಕಾಂತ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ನ್ಯಾ. ಸೂರ್ಯಕಾಂತ್ಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಷ್ಟ್ರಪತಿ
ನ್ಯಾ.ಸೂರ್ಯಕಾಂತ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ನ್ಯಾ.ಸೂರ್ಯಕಾಂತ್ 2027 ಫೆಬ್ರವರಿ 9ರವರೆಗೆ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ.
ಸಿಜೆಐ ಆಗಿ ಅಧಿಕಾರ ಸ್ವೀಕಾರ
ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಅಧಿಕಾರ ವಹಿಸಕೊಂಡಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.
ಮಧ್ಯಮ ವರ್ಗ ಕುಟುಂಬದಲ್ಲಿ ನ್ಯಾ. ಸೂರ್ಯಕಾಂತ್ ಜನನ
1962 ಫೆಬ್ರವರಿ 10ರಂದು ಹರಿಯಾಣದ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ನ್ಯಾ. ಸೂರ್ಯಕಾಂತ್, 1984ರಲ್ಲಿ ಹಿಸಾರ್‌ನಲ್ಲಿ ತಮ್ಮ ಕಾನೂನು ವೃತ್ತಿಯನ್ನು ಪ್ರಾರಂಭಿಸಿದ್ದರು.
2000ರಲ್ಲಿ ಹರಿಯಾಣದ ಕಿರಿಯ ಎಜೆ
2000 ಜುಲೈ ತಿಂಗಳಲ್ಲಿ ಹರಿಯಾಣದ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದ ಅವರು 2001ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು.
ಹರಿಯಾಣ ಮತ್ತು ಪಂಜಾಬ್ ಹೈಕೋರ್ಟ್ ನ್ಯಾಯಾಧೀಶ
2004 ಜನವರಿ 9ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು.
ಹಿಮಾಚಲ ಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ
2018 ಅಕ್ಟೋಬರ್ನಿಂದ 2019 ಮೇ 24ರವರೆಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆಯುವವರೆಗೆ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.
2024ರಿಂದ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಸೇವೆ
ನವೆಂಬರ್ 2024 ರಿಂದ ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ