ಬರ್ತ್​ಡೇ ಸೆಲೆಬ್ರೇಷನ್​​​ ಫೋಟೋಸ್​​​​​ ಹಂಚಿಕೊಂಡ ನಟಿ ರಮ್ಯಾ

ಭೂಮಿಕಾ ವಿ. ನಾಥ್​​​

ಬರ್ತ್​ಡೇ ಸೆಲೆಬ್ರೇಷನ್​​​ ಫೋಟೋಸ್​​​​​ ಹಂಚಿಕೊಂಡ ನಟಿ ರಮ್ಯಾ

ರಮ್ಯಾ ತಮ್ಮ ಬರ್ತ್‌ಡೇಯನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಸ್ನೇಹಿತರ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾದ ವಿನಯ್​ ರಾಜ್​ಕುಮಾರ್

ರಮ್ಯಾ ಅವರ ಈ ಸಂಭ್ರಮದಲ್ಲಿ ದೊಡ್ಮನೆಯ ಕುಡಿ ವಿನಯ್ ರಾಜ್ ಕುಮಾರ್ ಕೂಡ ಭಾಗಿಯಾಗಿದ್ದಾರೆ. ರಮ್ಯಾ ಅವರ ಸಂಭ್ರಮವನ್ನು ಇನ್ನೂ ಹೆಚ್ಚಿಸಿದ್ದಾರೆ.

ಅಭಿ ಸಿನಿಮಾ ಮೂಲಕನ ಪಾದಾರ್ಪಣೆ

ಅಭಿ ಸಿನಿಮಾ ಮೂಲಕ ಅಪ್ಪು ಜೊತೆ ತೆರೆಹಂಚಿಕೊಳ್ಳುವ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು.

ಸಂಸದೆಯಾಗಿ ರಾಜಕೀಯ ರಂಗದಲ್ಲೂ ಸೇವೆ

ನಟಿ ರಮ್ಯಾ ಕನ್ನಡ, ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿ ದಕ್ಷಿಣದ ಭಾರದಲ್ಲಿ ಖ್ಯಾತಿ ಪಡೆದಿದ್ದಾರೆ. ಜೊತೆಗೆ ಸಂಸದೆಯಾಗಿ ರಾಜಕೀಯ ರಂಗದಲ್ಲೂ ಸೇವೆ ಸಲ್ಲಿಸಿದ್ದಾರೆ

ನಾಗರಹಾವು ಸಿನಿಮಾದಲ್ಲಿ ಪ್ರಮುಖ ಪಾತ್ರ

2021ರಲ್ಲಿ ತೆರೆಕಂಡ ನಾಗರಹಾವು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದ ನಟಿ ರಮ್ಯಾ 2023ರಲ್ಲಿ ಬಿಡುಗಡೆಯಾದ ಹಾಸ್ಟೆಲ್ ಹುಡುಗರು ಸಿನಿಮಾ ಮೂಲಕ ಗೆಸ್ಟ್ ಅಪಿಯರೆನ್ಸ್ ಮೂಲಕ ಕಮ್‌ಬ್ಯಾಕ್ ಮಾಡಿದ್ರು.

ಸಿನಿಮಾ ನಿರ್ಮಾಣಕ್ಕೆ ತಯಾರಿ

ನಟಿ ರಮ್ಯಾ ಸಿನಿಮಾ ನಿರ್ಮಾಣ ಮಾಡಲು ಕೂಡಾ ತಯಾರಿಯನ್ನ ಮಾಡಿಕೊಂಡಿದ್ದಾರೆ. ಅದರ ಜೊತೆ ಜೊತೆಗೆ ಸಿನಿಮಾದ ಸ್ಕ್ರಿಪ್ಟ್‌ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ.