ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ನಾಯಕಿಯಾಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲ, ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ..ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಅಭಿನಯದ ಹಾರರ್ ಥ್ರಿಲ್ಲರ್ ಚಿತ್ರ ಥಮ್ಮಾ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ..ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ರಶ್ಮಿಕಾ ಸಿಕ್ಕಾಪಟ್ಟೆ ಹಾಟ್ ಆಗಿ ಸೊಂಟ ಬಳುಕಿಸಿದ್ದಾರೆ..ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ರಶ್ಮಿಕಾ ಮೈಮಾಟಕ್ಕೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ..ಥಮ್ಮಾ ಚಿತ್ರವು ಹಾರರ್ ಕಾಮಿಡಿ ಯುನಿವರ್ಸ್‌ನ 5ನೇ ಭಾಗವಾಗಿದ್ದು, ಆದಿತ್ಯ ಸರ್ಪೋಟ್ದಾರ್ ನಿರ್ದೇಶನದಲ್ಲಿ ಅಯುಷ್ಮಾನ್ ಖುರಾನಾ, ರಶ್ಮಿಕಾ ಮಂದಣ್ಣ, ನವಾಜುದ್ದೀನ್ ಸಿದ್ದಿಕಿ ಅಭಿನಯಿಸಿದ್ದಾರೆ.