ಸಾವಿರಾರು ಮರಗಳನ್ನು ನೆಟ್ಟು ಅವುಗಳನ್ನೇ ತನ್ನ ಮಕ್ಕಳಂತೆ ಸಾಕಿ ಸಲುಹಿದ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ
ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು
2 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮಕ್ಕಳಿಲ್ಲ ತಿಮ್ಮಕ್ಕನನ್ನು ಸಾಕು ಮಗ ಉಮೇಶ್ ಬಳ್ಳೂರು ನೋಡಿಕೊಳ್ಳುತ್ತಿದ್ದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ವೃಕ್ಷಮಾತೆಯನ್ನು ಕಳೆದುಕೊಂಡು ಪರಿಸರ ಲೋಕ ಅನಾಥವಾಗಿದೆ.
ಸಸಿಗಳನ್ನೇ ಮಕ್ಕಳಂತೆ ಸಾಕಿದ ತಿಮ್ಮಕ್ಕ
ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.