ಖೋ-ಖೋ ಪಂದ್ಯದಲ್ಲಿ ಅಮೃತ ಭಾರತಿಗೆ ಅವಳಿ ಪ್ರಶಸ್ತಿ

hbr (1)
Published on

ಹೆಬ್ರಿ: ಉಡುಪಿ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಹೆಬ್ರಿ ತಾಲೂಕುಮಟ್ಟದ ಖೋ-ಖೋ ಪಂದ್ಯವನ್ನು ಅಮೃತ ಭಾರತಿ ಹಾಸ್ಟೆಲ್ ಕಮಿಟಿ ಗೌರವಾಧ್ಯಕ್ಷ ಯೋಗೀಶ್ ಭಟ್ ಉದ್ಘಾಟಿಸಿದರು.

ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ, ಸುಧೀರ್ ನಾಯಕ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲ ಪ್ರಕಾಶ್ ಜೋಗಿ, ಹೆಬ್ರಿ ತಾಲೂಕು ಕ್ರೀಡಾ ಸಂಯೋಜಕ ವಿಜಯಕುವಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕಿ ಪಾವನ ಶೆಟ್ಟಿ, ಉಪನ್ಯಾಸಕರು ಉಪಸ್ಥಿತರಿದ್ದರು.

 ಫಲಿತಾಂಶ

ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಪ್ರಥಮ, ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ದ್ವೀತಿಯ ಸ್ಥಾನ ಪಡೆದುಕೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net