More

    ಅಮೂಲ್ಯ ಲಿಯೋನ್ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ವಾಪಸ್

    ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಅಮೂಲ್ಯ ಲಿಯೋನ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾಳೆ.

    ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಈಕೆ ಪಾಕ್ ಪರ ಘೋಷಣೆ ಕೂಗಿ ದೇಶಾದ್ಯಂತ ಸುದ್ದಿಯಾಗಿದ್ದಳು. ಜಾಮೀನು ಕೋರಿ ಅಮೂಲ್ಯ ಲಿಯೋನ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಅರ್ಜಿ ಹಿಂಪಡೆಯಲು ಅನುಮತಿ ನೀಡುವಂತೆ ಕೋರಿದರು.

    ಇದನ್ನೂ ಓದಿ  ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಶಾಲೆ-ಕಾಲೇಜುಗಳು ಆರಂಭ

    ಅರ್ಜಿ ಹಿಂಪಡೆಯಲು ಅನುಮತಿ ನೀಡಿದ ಪೀಠ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ನಂತರ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಬಹುದು ಎಂದು ಅವಕಾಶ ಕಲ್ಪಿಸಿ ಅರ್ಜಿ ವಜಾಗೊಳಿಸಿತು.

    ಉಪ್ಪಾರಪೇಟೆ ಠಾಣೆ ಪೊಲೀಸರ ಪರವಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಸರ್ಕಾರಿ ಅಭಿಯೋಜಕರು, ಪ್ರಕರಣ ಅತ್ಯಂತ ಗಂಭೀರವಾಗಿದ್ದು, ದೇಶದ್ರೋಹ ಆರೋಪದ ಅಡಿಯಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಆರೋಪಿಗೆ ಜಾಮೀನು ಮಂಜೂರು ಮಾಡಬೇಡಿ ಎಂದು ಕೋರಿದ್ದರು.

    ಲಾಕ್​ಡೌನ್​ ಮುಗಿಯಿತೆಂದು ಶಿಮ್ಲಾ ಪ್ರವಾಸಕ್ಕೆ ಹೊರಡುವುದಾದರೆ ಸ್ವಲ್ಪ ನಿಲ್ಲಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts