25.1 C
Bangalore
Friday, December 6, 2019

ಪ್ರೇಮ್​ಗೆ ಬೇಸರ ತಂದ ಆ್ಯಮಿ!

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಬೆಂಗಳೂರು: ‘ದಿ ವಿಲನ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮತ್ತು ‘ಕಿಚ್ಚ’ ಸುದೀಪ್ ಒಟ್ಟಿಗೆ ನಟಿಸಿದ್ದಾರೆ. ಅವರಿಬ್ಬರಲ್ಲಿ ಅಸಲಿ ವಿಲನ್ ಯಾರು ಎಂಬುದು ಇದುವರೆಗೂ ಬಹಿರಂಗಗೊಂಡಿಲ್ಲ. ಆದರೆ, ಸದ್ಯದ ಬೆಳವಣಿಗೆಯಲ್ಲಿ ಚಿತ್ರತಂಡದ ಪಾಲಿಗೆ ಚಿತ್ರದ ನಾಯಕಿ ಆ್ಯಮಿ ಜಾಕ್ಸನ್ ವಿಲನ್ ಆಗಿದ್ದಾರೆ! ಸ್ವತಃ ನಿರ್ದೇಶಕ ಪ್ರೇಮ್ ಹೇಳಿಕೊಂಡಿರುವ ಪ್ರಕಾರ, ಸಿನಿಮಾದ ಯಾವುದೇ ಪ್ರಮೋಷನ್​ನಲ್ಲಿ ಆ್ಯಮಿ ಭಾಗಿಯಾಗುತ್ತಿಲ್ಲ. ಈ ಮೂಲಕ ಅವರು ‘ದಿ ವಿಲನ್’ ಟೀಮ್​ಗೆ ಬೇಸರ ತಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ಆ್ಯಮಿ ಹಾಜರಿ ಹಾಕಿರಲಿಲ್ಲ. ಅಲ್ಲದೆ, ಇತ್ತೀಚೆಗೆ ಆಯೋಜಿಸಿದ್ದ ಪ್ರಿ-ಟೀಸರ್ ರಿಲೀಸ್ ಸಮಾರಂಭದಲ್ಲೂ ಅವರು ನಾಪತ್ತೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಪ್ರೇಮ್ ‘ನಾನು ಅವರ ಕೆಲಸವನ್ನು ಗೌರವಿಸುತ್ತೇನೆ. ಚಿತ್ರದಲ್ಲಿ ಅವರ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಅವರಲ್ಲಿ ಸಿಕ್ಕಾಪಟ್ಟೆ ಸಂವಹನದ ಕೊರತೆ ಇದೆ. ಸೂಪರ್ ಸ್ಟಾರ್​ಗಳಾದ ರಜನಿಕಾಂತ್, ಅಮಿತಾಭ್ ಬಚ್ಚನ್ ಅವರಂತಹ ಕಲಾವಿದರೇ ತಮ್ಮ ಸಿನಿಮಾಗಳ ಪ್ರಮೋಷನ್ ಮಾಡುವುದಕ್ಕೆ ಸದಾ ಸಿದ್ಧರಿರುತ್ತಾರೆ. ಆದರೆ, ಆಮಿ ಯಾವುದೇ ಸಮಾರಂಭಗಳಲ್ಲೂ ಭಾಗಿಯಾಗುತ್ತಿಲ್ಲ’ ಎನ್ನುತ್ತಾರೆ. ಈಗಾಗಲೇ ತಮಿಳು, ತೆಲುಗು ಸಿನಿಮಾಗಳನ್ನು ಮಾಡಿರುವ ಬ್ರಿಟನ್ ಮೂಲದ ಆ್ಯಮಿ, ‘ದಿ ವಿಲನ್’ ಮೂಲಕ ಕನ್ನಡಕ್ಕೂ ಕಾಲಿಟ್ಟಿದ್ದಾರೆ. ವಿಶೇಷವೆಂದರೆ, ಈ ಸಿನಿಮಾ ಕೂಡ ತೆಲುಗು-ತಮಿಳಿನಲ್ಲಿ ತೆರೆಕಾಣಲಿದೆ.

‘ತಾವು ನಟಿಸಿದ ಸಿನಿಮಾದ ಪ್ರಚಾರದಲ್ಲಿ ಪಾಲ್ಗೊಳ್ಳುವುದು ಎಲ್ಲ ಕಲಾವಿದರ ಜವಾಬ್ದಾರಿ. ಒಂದುವೇಳೆ, ಹಾಲಿವುಡ್, ಬಾಲಿವುಡ್ ಅಥವಾ ಬೇರೆ ಭಾಷೆಗಳ ಸಿನಿಮಾಗಳಲ್ಲೂ ಹೀಗೆ ಮಾಡಿದರೆ ಒಪ್ಪಬಹುದಿತ್ತು. ಎಷ್ಟೋ ಬಾರಿ ಶಿವಣ್ಣ-ಸುದೀಪ್ ಸೇರಿ ಅನೇಕರು ಆ್ಯಮಿ ಡೇಟ್ಸ್​ಗೆ ತಕ್ಕಂತೆ ಕೆಲಸ ಮಾಡಿದ್ದಾರೆ. ಸಿನಿಮಾ ತೆರೆಕಾಣುವುದಕ್ಕೆ ಇನ್ನು ಎರಡು ವಾರಗಳಿವೆ. ಅಷ್ಟರೊಳಗೆ ಸಿನಿಮಾ ಕುರಿತ ತಮ್ಮ ಅನುಭವಗಳನ್ನು ಮಾಧ್ಯಮಗಳೊಂದಿಗೆ ಆ್ಯಮಿ ಹಂಚಿಕೊಳ್ಳಬೇಕು. ಇಲ್ಲವಾದಲ್ಲಿ ತುಂಬ ಬೇಸರವಾಗಲಿದೆ’ ಎಂದಿದ್ದಾರೆ ಪ್ರೇಮ್ ಮಲ್ಟಿಪ್ಲೆಕ್ಸ್ ಆದಾಯದಲ್ಲಿ ಹೆಚ್ಚು ಪಾಲು?

‘ದಿ ವಿಲನ್’ ಸಿನಿಮಾ ಬಿಗ್ ಬಜೆಟ್​ನಲ್ಲಿ ಸಿದ್ಧಗೊಂಡಿದೆ.ಕನ್ನಡ ಮಾರುಕಟ್ಟೆಗಿಂತ ಕೊಂಚ ಜಾಸ್ತಿಯೇ ಹಣ ಹಾಕಿದ್ದಾರೆ ನಿರ್ವಪಕರು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಪ್ರೇಮ್ ಒಂದು ಮನವಿ ಮಾಡಿಕೊಂಡಿ ದ್ದಾರೆ. ‘ಮಲ್ಟಿಪ್ಲೆಕ್ಸ್​ನಲ್ಲಿ ಗಳಿಕೆಯಾಗುವ ಹಣದಲ್ಲಿ ಶೇ.50ಕ್ಕಿಂತಲೂ ಹೆಚ್ಚಿನ ಪಾಲು ನಿರ್ವಪಕರಿಗೆ ನೀಡಬೇಕು’ ಎಂದಿರುವ ಅವರು, ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಮನವಿ ನೀಡಿದ್ದಾರೆ. ಮಲ್ಟಿಪ್ಲೆಕ್ಸ್​ಗಳಲ್ಲಿ ಕಲೆಕ್ಷನ್ ಆಗುವ ಹಣದಲ್ಲಿ ವಾರದಿಂದ ವಾರಕ್ಕೆ ನಿರ್ವಪಕರಿಗೆ ಸಿಗುವ ಶೇರ್ ಕಡಿಮೆ ಆಗುತ್ತದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...