More

    ಮೀನು ನುಂಗಿದ 11 ತಿಂಗಳ ಮಗು

    ಶಿವಮೊಗ್ಗ: ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರು ಪಾರು ಮಾಡಿದ್ದಾರೆ.

    ಹೊನ್ನಾಳಿ ತಾಲೂಕು ನ್ಯಾಮತಿ ಸಮೀಪದ ಗಂಜೇನಹಳ್ಳಿಯ ಯೋಗೀಶ್-ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್ ಮನೆಯೊಳಗೆ ಆಟವಾಡುತ್ತಿದ್ದಾಗ ಮೀನನ್ನು ನುಂಗಿಬಿಟ್ಟಿತ್ತು. ಇದನ್ನು ಗಮನಿಸಿದ ಪಾಲಕರು ಮೀನನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಪ್ರಯತ್ನ ಫಲ ನೀಡದಿದ್ದಾಗ ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
    ಆಸ್ಪತ್ರೆಗೆ ಮಗು ಬರುವ ವೇಳೆಗೆ ಸ್ಥಿತಿ ಗಂಭೀರವಾಗಿತ್ತು. ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಿದ ತಜ್ಞ ವೈದ್ಯರು ಗಂಟಲಲ್ಲಿ ಸಿಲುಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರತೆಗೆದು ಮಗುವಿನ ಜೀವ ಉಳಿಸಿದ್ದಾರೆ. ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಕ್ಕಳ ತಜ್ಞ ವೈದ್ಯ ಡಾ. ಪ್ರದೀಪ್ ಚಿಕಿತ್ಸೆ ನೀಡಿದರು. ಮಗು ಪ್ರಾಣಾಪಾಯದಿಂದ ಪಾರಾಗಿದೆ.
    ಚಿಕ್ಕ ಮಕ್ಕಳು ಈ ರೀತಿ ಆಹಾರ ಪದಾರ್ಥ, ಚಾಕೋಲೇಟ್, ಕಾಡಿಗೆ ಡಬ್ಬಿ, ಅಡಕೆ, ಗೋಲಿ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳೂ ಈ ಹಿಂದೆ ನಡೆದಿದ್ದವು. ಹೀಗಾಗಿ ಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು ತೀವ್ರ ನಿಗಾ ಘಟಕ ಹಾಗೂ ಶಸ್ತ್ರ ಚಿಕಿತ್ಸಾ ಘಟಕದ ತಜ್ಞ ವೈದ್ಯ ಡಾ. ವಿನೋದ್, ಸರ್ಜಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ಧನಂಜಯ ಸರ್ಜಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts