ಗ್ರಾಹಕರಿಗೆ ನ್ಯಾಯ ಒದಗಿಸುವ ಕಾಯ್ದೆ:ಬಸವಪ್ರಭು

food
blank

ಶಿವಮೊಗ್ಗ: ತ್ವರಿತವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಗ್ರಾಹಕರ ನ್ಯಾಯಾಲಯ ಸ್ಥಾಪನೆಯಾಗಿದ್ದು, ಗ್ರಾಹಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಧಾರವಾಡ ಹೈಕೋರ್ಟ್ ಪೀಠದ ಹಿರಿಯ ವಕೀಲ ಬಸವಪ್ರಭು ಹೊಸಕೇರಿ ಹೇಳಿದರು.
ಗ್ರಾಹಕರ ಹಿತರಕ್ಷಣಾ ಕಾಯ್ದೆ 2019ರ ಕುರಿತು ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಗ್ರಾಹಕರ ಹಿತ ಕಾಯುವ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ. ಕಾಯ್ದೆಗಳ ಬಗ್ಗೆ ಅಧಿಕಾರಿಗಳು ಜ್ಞಾನ ಹೊಂದಬೇಕು ಎಂದು ತಿಳಿಸಿದರು.
ಪ್ರಸ್ತುತ ವ್ಯಾಪಾರದಲ್ಲಿ ಮೋಸ, ವಂಚನೆ ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ಬಗೆಹರಿಸಲು ವಿಶ್ವಸಂಸ್ಥೆ ನಿರ್ದೇಶನದ ಮೆರೆಗೆ ಭಾರತ 1986ರಲ್ಲಿ ಮೊದಲ ಬಾರಿಗೆ ಕಾಯ್ದೆ ಜಾರಿ ಮಾಡಿತು. ಕೇಂದ್ರ ಸರ್ಕಾರ 2019ರಲ್ಲಿ ಗ್ರಾಹಕರ ಹಿತರಕ್ಷಣಾ ಕಾನೂನಿಗೆ ಅನೇಕ ಮಾರ್ಪಾಡು ಮಾಡಿ ಜಾರಿಗೊಳಿಸಿದೆ. ಶೀಘ್ರವಾಗಿ ನ್ಯಾಯ ನೀಡುವುದು ಪ್ರಮುಖ ಉದ್ದೇಶವಾಗಿದೆ ಎಂದರು.
ಗ್ರಾಹಕರಲ್ಲಿ ಕಾಯ್ದೆ ಬಗ್ಗೆ ಜಾಗೃತಿ ಹೆಚ್ಚಿಸಲು ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ರಾಹಕ ರಕ್ಷಣಾ ಮಂಡಳಿ ಸ್ಥಾಪಿಸಲಾಗಿದೆ. ಹೊಸ ಕಾಯ್ದೆಯಿಂದ ಗ್ರಾಹಕರಿಗೆ ಅನೇಕ ಅನುಕೂಲಗಳಿವೆ. ವಸ್ತು ಮತ್ತು ಸೇವೆ ರೂಪದಲ್ಲಿ ಗ್ರಾಹಕರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಜಿಲ್ಲಾ ಕೇಂದ್ರದ ನ್ಯಾಯಾಲಯದಲ್ಲಿ ನ್ಯಾಯ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಆಹಾರ ನಾಗರಿಕ ಸರಬರಾಜು ಇಲಾಖೆ ನಿರ್ದೇಶಕ ಅವಿನ್ ಮಾತನಾಡಿ, ಗ್ರಾಹಕರ ಕಾನೂನು, ಅದರ ವ್ಯಾಪ್ತಿ, ಗ್ರಾಹಕರ ವಂಚನೆ ಪ್ರಕರಣಗಳ ಬಗ್ಗೆ ಮೊದಲು ಅಧಿಕಾರಿಗಳಿಗೆ ಕಾನೂನಿನ ಜ್ಞಾನ ಅವಶ್ಯಕ. ಆದ್ದರಿಂದ ಜಿಲ್ಲಾಡಳಿತದ ಮೂಲಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಬಳಕೆದಾರರ ವೇದಿಕೆ ಅಧ್ಯಕ್ಷ ಡಾ. ರವೀಂದ್ರನಾಥ್ ಶಾನುಭಾಗ್, ಜಿಲ್ಲಾ ಗ್ರಾಹಕರ ಮಾಹಿತಿ ಮತ್ತು ಗ್ರಾಹಕರ ರಕ್ಷಣಾ ಪರಿಷತ್ ಸಂಚಾಲಕ ಎಂ.ಎ.ಜಯಸ್ವಾಮಿ, ಡಿವೈಎಸ್ಪಿ ಕೆ.ಕೃಷ್ಣಮೂರ್ತಿ ಭಾಗವಹಿಸಿದ್ದರು.

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…