25.1 C
Bangalore
Friday, December 6, 2019

ರೌಡಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ರಕ್ಷಣೆ ಕೋರಿ ಸುಪ್ರೀಂಕೋರ್ಟ್​ ಎದುರು ವಕೀಲರೊಬ್ಬರ ಬೆತ್ತೆಲೆ ಪ್ರತಿಭಟನೆ

Latest News

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ನವದೆಹಲಿ: ತಮಗೆ ಪ್ರಾಣ ಬೆದರಿಕೆ ಇದೆ. ಸೂಕ್ತ ರಕ್ಷಣೆ ಒದಗಿಸುವಂತೆ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಅವರನ್ನು ಆಗ್ರಹಿಸಿ ವಕೀಲರೊಬ್ಬರು ಬೆತ್ತಲೆ ಪ್ರತಿಭಟನೆ ನಡೆಸಿದರು. ಸುಪ್ರೀಂಕೋರ್ಟ್​ನ ಭದ್ರತಾ ಸಿಬ್ಬಂದಿ ಬಟ್ಟೆ ಹಾಕಿಕೊಳ್ಳುವಂತೆ ಅವರ ಮನವೊಲಿಸಲು ಪ್ರಯತ್ನಿಸಿದರು. ಆದರೆ, ಅದು ಸಾಧ್ಯವಾಗದಿದ್ದಾಗ ಅವರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋದರು.

ಮಧುರೈ ಜಿಲ್ಲಾ ನ್ಯಾಯಾಲಯದ ವಕೀಲ ಸಿ.ಎಂ. ಸ್ವಾಮಿ ಪ್ರತಿಭಟಿಸಿದವರು. ತಾವೊಬ್ಬ ಸಾಮಾಜಿಕ ಕಾರ್ಯಕರ್ತ. ವೃತ್ತಿಯಿಂದ ವಕೀಲ. ನನಗೆ ಕೆಲವು ರೌಡಿಗಳಿಂದ ಪ್ರಾಣ ಬೆದರಿಕೆ ಇದೆ. ಸೂಕ್ತ ರಕ್ಷಣೆ ಒದಗಿಸುವಂತೆ ಕೋರಿ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಅವರಿಗೆ ಸಿ.ಎಂ. ಸ್ವಾಮಿ ಮನವಿ ಮಾಡಿಕೊಂಡಿದ್ದರು. ಆದರೆ ಸಿಜೆಐ ಅವರ ಮನವಿ ಪುರಸ್ಕರಿಸಲಿಲ್ಲ ಎನ್ನಲಾಗಿದೆ.

ಇದರಿಂದ ಸಿಟ್ಟಿಗೆದ್ದ ಸಿ.ಎಂ. ಸ್ವಾಮಿ, ಸುಪ್ರೀಂಕೋರ್ಟ್​ನ ಆವರಣದಲ್ಲಿರುವ ಮರದ ಬಳಿ ಬಟ್ಟೆಗಳೆಲ್ಲವನ್ನೂ ಕಳಚಿ ಮನವಿ ಪತ್ರವನ್ನು ಹಿಡಿದುಕೊಂಡು, ಸಿಜೆಐ, ದಯವಿಟ್ಟು ನನ್ನ ಮನವಿ ಆಲಿಸಿ ಎಂದು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ಅಂದಾಜು 5 ನಿಮಿಷ ಕಾಲ ಪ್ರತಿಭಟನೆ ನಡೆದ ಬಳಿಕ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ, ಬಟ್ಟೆ ಧರಿಸಿಕೊಳ್ಳುವಂತೆ ಸಿ.ಎಂ. ಸ್ವಾಮಿ ಮನವೊಲಿಸಲು ಪ್ರಯತ್ನಿಸಿದರು. ಆದರೆ ಕೇಳದಿದ್ದಾಗ ಅವರನ್ನು ವಶಕ್ಕೆ ಪಡೆದು, ಕರೆದೊಯ್ದರು. (ದಿಗ್ವಿಜಯ ನ್ಯೂಸ್​)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...