More

    ಕಾಂಗ್ರೆಸ್ ಸೋಲುವ ಭೀತಿಯಿಂದ ಜನರ ದಿಕ್ಕು ತಪ್ಪಿಸಲು ಪ್ರಯತ್ನ; ಶೋಭಾ ಕರಂದ್ಲಾಜೆ ಟೀಕೆ

    ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ಕ್ಷೇತ್ರದ ಅಭಿವೃದಗಧಿಗೆ ಅನುದಾನ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಬೇಸರದಲ್ಲಿದ್ದಾರೆ. ನಮ್ಮ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಪಕ್ಷದ ನಾಯಕರು ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಟೀಕಿಸಿದರು.

    ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಐದು ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. ಪಕ್ಷದ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಹುರಿದುಂಬಿಸುವ ಕೆಲಸ ಮಾಡಿದ್ದಾರೆ ಎಂದರು.

    ಮತದಾನ ಹೆಚ್ಚಳಕ್ಕೆ ಒತ್ತು

    ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆ ಎಂಬ ಮಾತು ಸಾರ್ವತ್ರಿಕವಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ಹೋಗಿ, ಮತದಾರರನ್ನ ಕರೆದುಕೊಂಡು ಬಂದು ಮತ ಹಾಕಿಸುವ ಪ್ರಯತ್ನ ಮಾಡಲಾಗುವುದು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರಿಗೆ ಅಮಿತ್ ಷಾ ಸೂಚಿಸಿದ್ದಾರೆ. ಜತೆಗೆ ನಾನು ಕೂಡ ಉಭಯ ಪಕ್ಷಗಳ ಮುಖಂಡರ ಸಹಕಾರದೊಂದಿಗೆ ಮತದಾನ ಪ್ರಮಾಣ ಹೆಚ್ಚಳಕ್ಕೆ ಒತ್ತು ನೀಡುವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

    ನಾಮಪತ್ರ ಸಲ್ಲಿಸುವ ಮುನ್ನ ಮೈಸೂರು ಬ್ಯಾಂಕ್ ವೃತ್ತದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದ ಅವರಿಗೆ ಮಾಜಿ ಸಚಿವ ಬೈರತಿ ಬಸವರಾಜ ಸಾಥ್ ನೀಡಿದರು.

    ಈ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಅವರು ಮಾತನಾಡಿ ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ದೊಡ್ಡ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಲೆ, ಜೆಡಿಎಸ್ ಜತೆಗೆ ಮೈತ್ರಿಯು ಉತ್ಸಾಹ, ಆತ್ಮವಿಶ್ವಾಸ ಹೆಚ್ಚಿಸಿದೆ ಎಂಬ ಸಂತಸ ವ್ಯಕ್ತಪಡಿಸಿದರು.

    ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಸಲ್ಲಿಸಿದ ನಾಮಪತ್ರಕ್ಕೆ ಸೂಚಕರಾಗಿ ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಬೈರತಿ ಬಸವರಾಜ, ಶಾಸಕ ಎಸ್.ಮುನಿರಾಜು, ಜೆಡಿಎಸ್ ಮುಖಂಡ ಜವರಾಯಿಗೌಡ ಸಹಿ ಹಾಕಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts