More

    ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ

    ಶಿವಮೊಗ್ಗ: ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿವಾಸದ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಮಲತಾಯಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

    ಕೇಂದ್ರದ ಎನ್‌ಡಿಎ ಸರ್ಕಾರ ಆರಂಭದಿಂದಲೂ ಕರ್ನಾಟಕದ ಬಗ್ಗೆ ಅಸಡ್ಡೆ ಭಾವನೆ ತಳೆದಿದೆ. ನಮಗೆ ಬರಬೇಕಿದ್ದ ತೆರಿಗೆ ಹಣವೂ ಬಂದಿಲ್ಲ. ರಾಜ್ಯದಲ್ಲಿ ಬರ ಪರಿಹಾರಕ್ಕೆಂದು 18,177 ಕೋಟಿ ರೂ. ಬೇಡಿಕೆಯಿದ್ದರೂ ಬಿಡಿಗಾಸು ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5,300 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
    15ನೇ ಹಣಕಾಸು ಆಯೋಗವು ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಶಿಾರಸ್ಸು ಮಾಡಿದ್ದರೂ ಈ ವರೆಗೂ ಬಿಡಿಗಾಸು ಬಂದಿಲ್ಲ. ಕೂಡಲೇ ಕೇಂದ್ರ ಸರ್ಕಾರ ತನ್ನ ದ್ವೇಷ ನೀತಿ ಬಿಡಬೇಕು. ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.
    ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿ.ಎ.ರಮೇಶ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ, ನೂರುಲ್ಲಾ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಪ್ರಮುಖರಾದ ಮಧುಸೂದನ್, ಅಕ್ಬರ್, ವಿಜಯ್, ಹರ್ಷಿತ್, ಗಿರೀಶ್, ರವಿ ಕಾಟಿಕೆರೆ, ಹರ್ಷಿತ್ ಗೌಡ, ಧನರಾಜ್, ಗೌತಮ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts