ಪ್ಯಾರಿಸ್: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ಗೆ ಇಂದು ಚಾಲನೆ ದೊರೆಯಲಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜುಲೈ 26 ಕ್ಕೆ ನಿಗದಿಪಡಿಸಲಾಗಿದ್ದರೂ, ಕೆಲವು ಪಂದ್ಯಾವಳಿಗಳು ಇಂದಿನಿಂದ ಶುರುವಾಗಲಿದೆ. ಇಂತಹ ಸಂದರ್ಭದಲ್ಲೇ ನಡೆದ ಅಹಿತಕರ ಘಟನೆಯೊಂದು ಕ್ರೀಡಾಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಕಾಮುಕರು ಗ್ಯಾಂಗ್ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಮಾಡಲಾಗಿದೆ.
CCTV footage shows the moment a distressed Australian woman enters a Kebab house seeking help after being gang r*ped by 5 men of ‘African appearance’ in Paris.
As she seeks help, one of her attackers walks in and pats her on the back before a customer punches him in the face… pic.twitter.com/mumFfEuI2z
— Oli London (@OliLondonTV) July 23, 2024
ಇದೇ ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್‌ವೊಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ಐವರು ಕಾಮುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಫ್ರಾನ್ಸ್ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಇಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ.
ವೈರಲ್ ವೀಡಿಯೋನಲ್ಲಿ ಏನಿದೆ?: ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಆಕೆ ಹರಿದ ಬಟ್ಟೆಯಲ್ಲೇ ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕಬಾಬ್ ಶಾಪ್‌ಗೆ ಓಡಿ ಬಂದು ಬಂದು ರಕ್ಷಣೆ ಪಡೆದಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋ ಕಂಡ ಅನೇಕರು ಈ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿ ವಿಡಿಯೋದಲ್ಲಿ ಆ ಮಹಿಳೆಯು ಓಡೋಡಿ ಬರುವುದು, ಭಯಭೀತರಾಗಿರುವುದು, ಸಹಾಯಕ್ಕಾಗಿ ಅಲ್ಲಿರುವ ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಳ್ಳುವ ದೃಶ್ಯಾವಳಿಗಳು ಸೆರೆಯಾಗಿವೆ. ಈಗಾಗಲೇ ಪ್ಯಾರಿಸ್ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದರೂ ಕೂಡ ಈ ಘಟನೆ ನಡೆದಿರುವು ನಿಜಕ್ಕೂ ಆಘಾತಕಾರಿ ಸಂಗತಿ.
ಹಾವೇರಿ: ಫೇಸ್ಬುಕ್ ಯುವತಿ ನಂಬಿ ಬರೋಬ್ಬರಿ 30 ಲಕ್ಷ ರೂ. ಕಳೆದುಕೊಂಡ ಯೋಗ ಶಿಕ್ಷಕ!