More

    ದೇಶದ ಭವಿಷ್ಯ ಬರೆಯುವ ಚುನಾವಣೆ

    ಕಳಸ: ದೇಶದ ಇತ್ತೀಚಿನ ವಿದ್ಯಮಾನಗಳನ್ನು ನೋಡಿದರೆ ಲೋಕಸಭೆ ಚುನಾವಣೆ ಸಾಮಾನ್ಯ ಚುನಾವಣೆಯಾಗಿ ಕಾಣುತ್ತಿಲ್ಲ. ಬದಲಾಗಿ ದೇಶದ ಭವಿಷ್ಯ ಬರೆಯಲಿದೆ ಎಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಹಳುವಳ್ಳಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಮರ್ಥ, ಸಮೃದ್ಧ, ಶಕ್ತಿಶಾಲಿ ಭಾರತ ನಿರ್ಮಾಣ ನಮ್ಮ ಹಿರಿಯರ ಕನಸಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿತ್ತು. ಕಾಶ್ಮೀರದಲ್ಲಿ ಉಗ್ರರ ಹಾವಳಿ ತಲೆ ಎತ್ತಿತ್ತು. ಸದ್ಯ ಭಯೋತ್ಪಾದನೆ ನಿರ್ಮೂಲನೆಯತ್ತ ಕೇಂದ್ರ ಸರ್ಕಾರ ಹೆಜ್ಜೆ ಇಟ್ಟಿದೆ ಎಂದರು.
    ಭಾರತ ಪ್ರಪಂಚದ ಆರ್ಥಿಕ ಸುಸ್ಥಿತಿಯಲ್ಲಿರುವ ದೇಶಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ದೇಶದ ಸಂರಕ್ಷಣೆ, ಭದ್ರತೆ, ಸ್ವಾಭಿಮಾನದ ವಿಚಾರವಾಗಿ ಪ್ರತಿ ನಾಗರಿಕನೂ ಆಲೋಚಿಸಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
    ಮುಂದಿನ ಚುನಾವಣೆಯಲ್ಲಿ ಬಿಜೆಪಿ ಕಾಯಕರ್ತರು ತಲೆ ಎತ್ತಿ ಮತ ಕೇಳುವಂತೆ ಮಾಡುತ್ತೇನೆ ಎನ್ನುವ ಭರವಸೆ ಪ್ರಧಾನಿ ನರೇಂದ್ರ ಮೋದಿ ಕೊಟ್ಟಿದ್ದರು. ಈಗ ನಾವು ತಲೆ ಎತ್ತಿ ಮತ ಕೇಳುವಂತೆ ಮಾಡಿದ್ದಾರೆ ಎಂದರು.
    ಉಪಸಭಾಪತಿ ಎಂ.ಕೆ.ಪ್ರಾಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಮೂಡಿಗೆರೆ ಮಂಡಲ ಅಧ್ಯಕ್ಷ ಗಜೇಂದ್ರ, ಕಳಸ ಶಕ್ತಿ ಕೇಂದ್ರ ಅಧ್ಯಕ್ಷ ನಾಗಭೂಷಣ್, ಮುಖಂಡರಾದ ಎಚ್.ಸಿ.ಕಲ್ಮರುಡಪ್ಪ, ದೀಪಕ್ ದೊಡ್ಡಯ್ಯ, ಎಂ.ಎ.ಶೇಷಗಿರಿ, ಸುಜಯಾ ಸದಾನಂದ, ಉಷಾ ವಿಶ್ವನಾಥ, ವೆಂಕಟಸುಬ್ಬಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts