

ಸಿಕಂದರಾಬಾದ್: ಅಗ್ನಿಪಥ ಯೋಜನೆ ವಿರೋಧಿಸಿ ಸಿಕಂದರಾಬಾದ್ನಲ್ಲಿ ಉಂಟಾಗಿದ್ದ ಗಲಭೆಯ ಹಿಂದಿನ ಪ್ರಮುಖ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.
ಆವುಲ ಸುಬ್ಬಾ ರಾವ್ನನ್ನು ವಶಕ್ಕೆ ಪಡೆಯಲಾಗಿದ್ದು, ಈತ ಮಾಜಿ ಸೈನಿಕನಾಗಿದ್ದು, ಅಗ್ನಿಪಥ ಯೋಜನೆ ಖಂಡಿಸಿ ತೆಲಂಗಾಣದ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿಂಸಾಚಾರದ ರೂವಾರಿ ಈತನೇ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದ. ಈ ಎಲ್ಲಾ ಘಟನೆಗೂ ಈತನೇ ಕಾರಣ ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
ವಾಟ್ಸಾಪ್ ಮೂಲಕ ಮೆಸೇಜ್ ಕಳುಹಿಸಿ ಹೆಚ್ಚು ಜನರನ್ನು ಸೇರಿಸಿ ಗಲಭೆ ಸೃಷ್ಟಿಸಲು ಈತ ಪ್ರಚೋದನೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬಂಧಿತ ರಾವ್ ಆಂದ್ರಪ್ರದೇಶದ ಪ್ರಕಾಶಮ್ ಜಿಲ್ಲೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ನರಸರಾವ್ಪೇಟೆ, ಹೈದರಾಬಾದ್ ಮತ್ತು ಸೇರಿದಂತೆ ಎಳು ಕಡೆ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಶಾಖೆಯನ್ನು ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಅದೊನಿ, ಕರ್ನೂಲ್, ಗುಂಟೂರ್, ನೆಲ್ಲೂರು, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯಲ್ಲಿ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್)