24.9 C
Bangalore
Wednesday, December 11, 2019

ಸಂಜಯ್​ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಮೂಕಪ್ರಾಣಿಯನ್ನು ಕೊಂದ ಶಿವಸೇನೆ ಸಂಸದನ ಕಾರು; ಅತಿವೇಗವೇ ದುರ್ಘಟನೆಗೆ ಕಾರಣ

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಮುಂಬೈ: ಶಿವಸೇನಾ ಸಂಸದ ರಾಜೇಂದ್ರ ಗವಿತ್​ ಅವರಿಗೆ ಸೇರಿದ ಕಾರು ಸಂಜಯ್​ ಗಾಂಧಿ ರಾಷ್ಟ್ರೀಯ ಉದ್ಯಾನವನ (ಎಸ್​ಜಿಎನ್​ಪಿ)ದಲ್ಲಿ ಜಿಂಕೆಗೆ ಡಿಕ್ಕಿಹೊಡೆದ ಪರಿಣಾಮ, ಆ ಮೂಕಪ್ರಾಣಿ ಮೃತಪಟ್ಟಿದೆ.

ಎಸ್​ಜಿಎನ್​ಪಿ ನಿರ್ದೇಶಕ ಹಾಗೂ ಅರಣ್ಯ ಮುಖ್ಯ ಸಂರಕ್ಷಕರಾಗಿರುವ ಅನ್ವರ್​ ಅಹ್ಮದ್​ ಈ ಬಗ್ಗೆ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಪಟ್ಟಂತೆ ದುಡುಕಿನಿಂದ ಕಾರು ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಓರ್ವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಉದ್ಯಾನವನದ ಮೂಲಗಳ ಪ್ರಕಾರ ಬುಧವಾರ ಸಂಜೆ 6-30ರ ವೇಳೆಗೆ ಘಟನೆ ನಡೆದಿದೆ. ಈ ಕಾರಿನ ರಿಜಿಸ್ಟ್ರೇಶನ್​ ಶಿವಸೇನಾ ಸಂಸದ ರಾಜೇಂದ್ರ ಗವಿತ್​ ಹೆಸರಲ್ಲಿರುವುದು ಸ್ಪಷ್ಟವಾಗಿದೆ.

ಸಂಜಯ್​ಗಾಂಧಿ ನ್ಯಾಷನಲ್​ ಪಾರ್ಕ್​ನಲ್ಲಿರುವ ತ್ರಿಮೂರ್ತಿ ಸ್ಟೇಶನ್​ ಬಳಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಈ ಎಸ್​ಯುವಿ ಕಾರು ಡಿಕ್ಕಿಯಾಗಿದೆ ಎಂದು ಒಂದು ಮೂಲ ತಿಳಿಸಿದೆ.

ಹಾಗೆಯೇ ನ್ಯಾಷನಲ್​ ಪಾರ್ಕ್​ನ ಹೆಸರು ಹೇಳಲು ಇಚ್ಛಿಸದ ಸಿಬ್ಬಂದಿಯೋರ್ವರು ಮಾಹಿತಿ ನೀಡಿದ್ದು, ಕಾರು ಎಸ್​ಜಿಎನ್​ಪಿಯ ಮುಖ್ಯದ್ವಾರದ ಬಳಿ ಹೋಗುತ್ತಿತ್ತು. ಈ ವೇಳೆ ಗಾಂಧಿ ತೆಕ್ಡಿ ಸಮೀಪ ಜಿಂಕೆಗೆ ಡಿಕ್ಕಿ ಹೊಡೆದಿದೆ. ಕೂಡಲೇ ಕಾರಿನ ಚಾಲಕ ಆಗಮಿಸಿ ವಿಷಯ ತಿಳಿಸಿದ್ದಾನೆ. ಜಿಂಕೆಯನ್ನು ಪಶುವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿತ್ತು ಎಂದು ತಿಳಿಸಿದ್ದಾರೆ.

ವಾಹನವನ್ನು ಸೀಜ್​ ಮಾಡಲಾಗಿದೆ ಮತ್ತು ಅರಣ್ಯ ಅಪರಾಧ ಮೊಕದ್ದಮೆ ಹೂಡಿದ್ದಾಗಿ ನ್ಯಾಷನಲ್​ ಪಾರ್ಕ್​ ಮಿಡ್​ ಡೇ ಪತ್ರಿಕೆಗೆ ತಿಳಿಸಿವೆ. ಅಲ್ಲದೆ ನಿನ್ನೆ ಮಿಡ್​ ಡೇ ತಂಡ ಎಸ್​ಜಿಎನ್​ಪಿಗೆ ಭೇಟಿ ಕೊಟ್ಟಾಗ, ಜಿಂಕೆಗೆ ಡಿಕ್ಕಿ ಹೊಡೆದ ಎಸ್​ಯುವಿ ಕಾರು ನಿರ್ದೇಶಕರ ಕಚೇರಿ ಎದುರು ಪಾರ್ಕ್​ ಆಗಿರುವುದು ಕಂಡು ಬಂದಿದೆ ಎಂದು ಪತ್ರಿಕೆ ವರದಿ ಮಾಡಿದೆ.

ನ್ಯಾಷನಲ್​ ಪಾರ್ಕ್​ ಬಳಿ ನಿಧಾನವಾಗಿ ವಾಹನ ಚಲಾಯಿಸಿ ಎಂದು ನಾವು ಪದೇಪದೆ ನಿರ್ದೇಶನ ನೀಡಿದರೂ ವಾಹನ ಚಾಲಕರು ನಿರ್ಲಕ್ಷ್ಯ ಮಾಡುತ್ತಾರೆ. ಇಲ್ಲಿಗೆ ಬರುವ ಪರಿಸರ ಪ್ರೇಮಿಗಳೂ ಕೂಡ ನಮ್ಮ ಬಳಿ ಇದೇ ದೂರು ನೀಡಿದ್ದಾರೆ. ಶೀಘ್ರವೇ ವಾಹನ ಚಾಲಕರಿಗಾಗಿ ಅಭಿಯಾನ ಹಮ್ಮಿಕೊಳ್ಳುತ್ತೇವೆ ಎಂದು ಎಸ್​ಜಿಎನ್​ಪಿ ನಿರ್ದೇಶಕ ಅನ್ವರ್​ ತಿಳಿಸಿದ್ದಾರೆ. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...