More

    ಈಡೇರದ ದಶಕದ ಬೇಡಿಕೆ

    ತಿ.ನರಸೀಪುರ:ಪುರಸಭಾ ವ್ಯಾಪ್ತಿಗೆ ಒಳಪಡುವ ಮುದ್ದುಬೀರನಹುಂಡಿ ಗ್ರಾಮದ ಜನರ ದಶಕಗಳ ಬೇಡಿಕೆಯಾದ ಚರಂಡಿ, ಕುಡಿಯುವ ನೀರು, ರಸ್ತೆ, ಸಮರ್ಪಕ ವಿದ್ಯುತ್ ವ್ಯವಸ್ಥೆ ಇದುವರೆಗೆ ಈಡೇರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ.

    ಈ ಗ್ರಾಮದಲ್ಲಿ 400 ರಿಂದ 500 ಕುಟುಂಬಗಳು ನೆಲೆಸಿದ್ದು, ಹೆಚ್ಚಾಗಿ ಕುರುಬ ಜನಾಂಗದವರು ವಾಸಿಸುತ್ತಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿರುವ ಈ ಗ್ರಾಮ ಪುರಸಭೆಯಾಗಿ ಮೇಲ್ದರ್ಜೆಗೇರುವ ಮೊದಲು ಆಲಗೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತಿತ್ತು. ಸದ್ಯ 12ನೇ ವಾರ್ಡ್ ವ್ಯಾಪ್ತಿಗೆ ಒಳಪಡುತ್ತಿದೆ.

    ಈ ಗ್ರಾಮವು ವರುಣ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದ್ದು, ಅಭಿವೃದ್ಧಿಗೆ ಗ್ರಾಮಸ್ಥರು 15 ವರ್ಷಗಳಿಂದ ಮನವಿ ಸಲ್ಲಿಸಿಕೊಂಡು ಬರುತ್ತಿದ್ದರೂ ಇದುವರೆಗೆ ಪ್ರಯೋಜನವಾಗಿಲ್ಲ. ಸಿದ್ದರಾಮಯ್ಯ ಅವರು ವಿರೋಧಪಕ್ಷದ ನಾಯಕರಾಗಿದ್ದ ಸಂದರ್ಭ ಗ್ರಾಮದ ಮುಖಂಡರು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭ ಹಂತ ಹಂತವಾಗಿ ಅಭಿವೃದ್ಧಿ ಮಾಡುವ ಭರವಸೆ ನೀಡಿದ್ದರು. ಅಲ್ಲದೆ ಇದೇ ಸಂದರ್ಭ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಿದ್ದರು. ಆದರೆ, ಇದುವರೆಗೆ ಅಭಿವೃದ್ಧಿ ಕಂಡಿಲ್ಲ.

    ಗ್ರಾಮದಲ್ಲಿ ಒಳಚರಂಡಿ ಕಾಮಗಾರಿಗಾಗಿ ರಸ್ತೆಗಳನ್ನು ಅಗೆದಿದ್ದು, ಸರಿಪಡಿಸಿಲ್ಲ. ಶಾಲಾ ಕಟ್ಟಡ, ಅಂಗನವಾಡಿ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗಿದ್ದು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಕುರಿತು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಅಧಿಕಾರಿಗಳನ್ನು ಕೇಳಿದರೆ ಹಣ ಇಲ್ಲ ಎಂಬ ಕಾರಣ ನೀಡುತ್ತಾರೆ ಎಂದು ಗ್ರಾಮಸ್ಥರು ದೂರುತ್ತಾರೆ.

    ಗ್ರಾಮದ ಪಕ್ಕದಲ್ಲಿರುವ ಕೆರೆ ಅಭಿವೃದ್ಧಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಗ್ರಾಮದ ರಸ್ತೆಗಳು ಗುಂಡಿ ಬಿದ್ದಿದ್ದು, ಮಳೆ ಬಂತೆಂದರೆ ರಸ್ತೆ ಮಧ್ಯೆ ನೀರು ನಿಂತು ಸಮಸ್ಯೆಗಳಾಗುತ್ತವೆ. ಸಚಿವರ ಗಮನಕ್ಕೆ ತಂದರೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿ ನುಣುಚಿಕೊಳ್ಳುತ್ತಾರೆ ಎಂದು ಗ್ರಾಮಸ್ಥರು ಅಸಮಾಧಾನ ಹೊರಹಾಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts