ಶಾಸಕರ ಕಾರಿಗೆ ಮಹಿಳೆ ಬಲಿ; ಕಾರು-ಬೈಕ್ ಅಪಘಾತದಲ್ಲಿ 58 ವರ್ಷದ ಸ್ತ್ರೀ ಸ್ಥಳದಲ್ಲೇ ಸಾವು..

ಹಾಸನ: ಶಾಸಕರ‌ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಲ್ಲದೆ ಆಕೆಯ ಮೊಮ್ಮಗ ಕೂಡ ಗಾಯಗೊಂಡಿದ್ದಾನೆ. ಹಾಸನ ಜಿಲ್ಲೆಯ ಬೇಲೂರಿನ ಹನುಮಂತನಗರದಲ್ಲಿ ಈ ಅಪಘಾತ ಸಂಭವಿಸಿದೆ. ಹನುಮಂತನಗರದ ನಿವಾಸಿ ಹೂವಮ್ಮ‌ (58) ಮೃತಪಟ್ಟವರು. ಈಕೆಯ ಮೊಮ್ಮಗ ಪ್ರೀತಂ ಗಾಯಗೊಂಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದ್ದರಿಂದ ಹಿಂಬದಿಯಲ್ಲಿ ಕೂತಿದ್ದ ಹೂವಮ್ಮ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಇಲ್ಲಿ ಇಂದು ಮತ್ತೆ ಭೂಕಂಪ!; … Continue reading ಶಾಸಕರ ಕಾರಿಗೆ ಮಹಿಳೆ ಬಲಿ; ಕಾರು-ಬೈಕ್ ಅಪಘಾತದಲ್ಲಿ 58 ವರ್ಷದ ಸ್ತ್ರೀ ಸ್ಥಳದಲ್ಲೇ ಸಾವು..