ಆನಗೋಡು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

ಮಾಯಕೊಂಡ: ಆನಗೋಡಿನಲ್ಲಿ ಫೆ. 8ರಂದು ನಡೆಯಲಿರುವ ದಾವಣಗೆರೆ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಆರ್.ಜಿ. ಹಳ್ಳಿ ನಾಗರಾಜ್ ಅವರಿಗೆ ಸಾಹಿತ್ಯ ಪರಿಷತ್‌ನಿಂದ ಭಾನುವಾರ ಅಧಿಕೃತ ಆಹ್ವಾನ ನೀಡಲಾಯಿತು.

ತಾಲೂಕು ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಮಾತನಾಡಿ, ಆರ್.ಜಿ. ಹಳ್ಳಿ ನಾಗರಾಜ್ ವಿಮರ್ಶೆ, ಬಂಡಾಯ ಸಾಹಿತ್ಯದಲ್ಲಿ ಛಾಪು ಮೂಡಿಸಿದ್ದಾರೆ. ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಕೆಲವು ಕೃತಿ ರಚಿಸಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತಿ ಕೆ.ಎಸ್. ಬಸವಂತಪ್ಪ ಮಾತನಾಡಿ, ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಮ್ಮೇಳನ ಉದ್ಘಾಟಿಸುವರು. ಸಮಾರೋಪದಲ್ಲಿ ಹೆಬ್ಬಾಳಿನ ವಿರಕ್ತಮಠದ ಮಹಾಂತರುದ್ರ ಸ್ವಾಮೀಜಿ ಆಗಮಿಸಲಿದ್ದಾರೆ ಎಂದರು.

ರಂಗ ಸಮಾಜದ ಸದಸ್ಯ ಮಲ್ಲಿಕಾರ್ಜುನ ಕಡಕೋಳ, ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ.ಎನ್. ಮಲ್ಲೇಶ್, ಶಿಮುಲ್ ಪಾಲಾಕ್ಷಪ್ಪ, ಸಾಹಿತಿ ಎನ್.ಎಸ್. ರಾಜು, ನಾಗರಾಜ್ ಸಿರಿಗೆರೆ ಇತರರಿದ್ದರು.