ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅನಂತ್​​ ಅಂಬಾನಿ ನೇಮಕ | Anant Ambani

Anant Ambani
Published on

Anant Ambani: ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರನ್ನು ಮುಂದಿನ ಐದು ವರ್ಷಗಳ ಅವಧಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ಶನಿವಾರ ವರದಿಯಾಗಿದೆ.

ಮೇ.1 ರಿಂದ ಇದು ಜಾರಿಯಾಗಲಿದ್ದು, ಐದು ವರ್ಷಗಳ ಅವಧಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ಕಂಪನಿ ಷೇರುಪೇಟೆಗೆ ತಿಳಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಶುಕ್ರವಾರ(ಏ.25)ದಂದು ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿಈ ಕುರಿತು ನಿರ್ಣಯ ಕೈಗೊಂಡಿದ್ದು, ಕಂಪನಿಯ ಮಾನವ ಸಂಪನ್ಮೂಲ ವಿಭಾಗ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಗೆ ಶಿಫಾರಸ್ಸು ಮಾಡಲಾಗಿದ್ದು, ಇದು ಸಂಸ್ಥೆಯ ಸದಸ್ಯರ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ಕಂಪನಿ ಷೇರುಪೇಟೆಗೆ ಮಾಹಿತಿ ನೀಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net