

ಮುಂಬೈ: ಮುಖೇಶ್ ಅಂಬಾನಿ ಹಾಗೂ ನೀತು ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ವಿವಾಹ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿರುವುದು ಗೊತ್ತೇ ಇದೆ. ಈ ಮದುವೆ ಸಮಾರಂಭ ನಡೆಯುತ್ತಿದ್ದ ಸ್ಥಳದಲ್ಲಿ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಹಾಕಲಾಗಿತ್ತು. ಪೊಲೀಸರು ಕೂಡಲೇ ಸನ್ನದ್ಧರಾಗಿ ಭದ್ರತೆಯನ್ನು ಹೆಚ್ಚಿಸಿದ್ದರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ನಾಳೆ ಅಂಬಾನಿ ಮದುವೆಯಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಬಳಕೆದಾರರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಇದು ಸುಳ್ಳು ಸುದ್ದಿ ಎಂದು ಗೊತ್ತಿತ್ತು ಆದರೂ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ರುವ ಮದುವೆ ಸುತ್ತಲೂ ಬಿಗಿ ಭದ್ರತೆ ಹೆಚ್ಚಿಸಿದ್ದರು.
ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಜುಲೈ 12 ಶುಕ್ರವಾರ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ನಡೆಯಿತು. ಈ ಸಮಾರಂಭಕ್ಕೆ ವಿದೇಶಿ ನಟರು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು ಮತ್ತು ರಾಜಕಾರಣಿಗಳು ಸೇರಿ ಬಹುದೊಡ್ಡ ತಾರಾ ಬಣವೇ ಭಾಗವಹಿಸಿದ್ದರು.
ಬಾಂಬ್ ಬಗ್ಗೆ ಮಾಡಿದ್ದ ಪೋಸ್ಟ್ನಲ್ಲಿ ಏನಿದೆ?: ಅಂಬಾನಿ ಅವರ ಕುಟುಂಬದ ಮದುವೆಗೆ ಹೋದರೆ ನಾಳೆ ಅರ್ಧದಷ್ಟು ಪ್ರಪಂಚ ತಲೆಕೆಳಗಾಗಿ ಹೋಗುತ್ತದೆ ಎಂದು ನನ್ನ ಮನಸ್ಸು ನಾಚಿಕೆಯಿಲ್ಲದೆ ಆಶ್ಚರ್ಯ ಪಡುತ್ತಿದೆ. ಒಂದು ಪಿನ್ ಕೋಡ್ನಲ್ಲಿ ಟ್ರಿಲಿಯನ್ಗಟ್ಟಲೆ ಡಾಲರ್ಗಳು. ಎಂದು ಪೋಸ್ಟ್ ಮಾಡಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಈ ಪೋಸ್ಟ್ ಹಿಂದಿರುವ ವ್ಯಕ್ತಿಗಾಗಿ ಶೋಧ ನಡೆಸಿದ್ದಾರೆ. ಜೊತೆಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಪ್ರಕರಣ ದಾಖಲಿಸಿಲ್ಲ, ಆದರೆ ಈ ರೀತಿ ಪೋಸ್ಟ್ ಮಾಡಿದ ವ್ಯಕ್ತಿ ಯಾರಿರಬಹುದು ಹಾಗೂ ಆತನ ಪೋಸ್ಟ್ ಹಿಂದಿನ ಉದ್ದೇಶ ಏನಿರಬಹುದು ಎಂಬ ಬಗ್ಗೆ ತನಿಖೆ ಮಾಡುತ್ತಿದ್ದಾರೆ.