More

    ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ- ರಾಧಿಕಾ ಮರ್ಚಂಟ್ ನಿಶ್ಚಿತಾರ್ಥ

    ರಾಜಸ್ಥಾನ: ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್​ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಮುಕೇಶ್​ ಅಂಬಾನಿಯವರ ಕಿರಿಯ ಮಗನಿಗೆ ವಿವಾಹ ನಿಶ್ಚಯವಾಗಿದೆ.

    ಶೈಲಾ ಮತ್ತು ವೀರೇನ್ ಮರ್ಚಂಟ್​ರ ಪುತ್ರಿ ರಾಧಿಕಾ ಮರ್ಚೆಂಟ್ ಮತ್ತು ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಅವರ “ರೋಕಾ” (ನಿಶ್ಚಿತಾರ್ಥ) ಸಮಾರಂಭ ಇಂದು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ನಡೆಯಿತು. ನಿಶ್ಚಿತಾರ್ಥ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದ್ದು ಭಾವಿ ವಧು-ವರರು ಹಿರಿಯರ ಆಶೀರ್ವಾದ ಪಡೆದಿದ್ದಾರೆ.

    ಭಾವೀ ದಂಪತಿಗಳು ದೇವಸ್ಥಾನದ ಅರ್ಚಕರ ಸಮ್ಮುಖದಲ್ಲಿ ತಮ್ಮ ಮುಂಬರುವ ಜೀವನಕ್ಕಾಗಿ ಭಗವಾನ್ ಶ್ರೀನಾಥಜಿಯ ಆಶೀರ್ವಾದವನ್ನು ಕೋರಿದ್ದಾರೆ. ದೇವಾಲಯದಲ್ಲಿ ಸಾಂಪ್ರದಾಯಿಕ ರಾಜ್-ಭೋಗ್-ಶೃಂಗಾರ್ ಸಮಾರಂಭಗಳೂ ನಡೆದಿವೆ. ಇದರ ನಂತರ ಕುಟುಂಬ ಮತ್ತು ಸ್ನೇಹಿತರು ಒಟ್ಟಾಗಿ ಸಂತೋಷದ ಸಂದರ್ಭವನ್ನು ಆಚರಿಸಿದ್ದಾರೆ.

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್​ ಕೆಲವು ವರ್ಷಗಳಿಂದ ಪರಸ್ಪರ ಪರಿಚಿತರು. ಇದೀಗ ಅವರ ನಿಶ್ಚಿತಾರ್ಥ ನಡೆದಿದ್ದು ಮುಂಬರುವ ದಿನಗಳಲ್ಲಿ ಇಡೀ ದೇಶವೇ ನೋಡಿರದ ಭರ್ಜರಿ ವಿವಾಹ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    ಅನಂತ್ ಅಂಬಾನಿ, ಬ್ರೌನ್ ವಿಶ್ವವಿದ್ಯಾನಿಲಯದಿಂದ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ್ದು ಜಿಯೋ ಪ್ಲಾಟ್‌ಫಾರ್ಮ್‌ಗಳು ಮತ್ತು ರಿಲಯನ್ಸ್ ರಿಟೇಲ್ ವೆಂಚರ್ಸ್‌ನ ಮಂಡಳಿಗಳಲ್ಲಿ ಸದಸ್ಯರಾಗಿದ್ದಾರೆ. ಈ ಹಿಂದೆ ರಿಲಯನ್ಸ್ ಇಂಡಸ್ಟ್ರೀಸ್‌ನಲ್ಲಿ ಕೆಲಸ ಮಾಡಿದ್ದು ಅವರು ಪ್ರಸ್ತುತ RILನ ಇಂಧನ ವ್ಯವಹಾರವನ್ನು ಮುನ್ನಡೆಸುತ್ತಿದ್ದಾರೆ.

    ರಾಧಿಕಾ, ನ್ಯೂಯಾರ್ಕ್ ವಿಶ್ವವಿದ್ಯಾನಿಲಯದ ಪದವೀಧರರಾಗಿದ್ದು, ಎನ್ಕೋರ್ ಹೆಲ್ತ್‌ಕೇರ್ ಮಂಡಳಿಯಲ್ಲಿ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್​ನ ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕಿ, ಪರಿಮಲ್​ ನಾಥ್ವಾನಿ, ಭಾವಿ ದಂಪತಿಗಳನ್ನು ಟ್ವಿಟರ್‌ನಲ್ಲಿ ಅಭಿನಂದಿಸಿದ್ದಾರೆ.

    ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ- ರಾಧಿಕಾ ಮರ್ಚಂಟ್ ನಿಶ್ಚಿತಾರ್ಥ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts