More

    ಬಿಜೆಪಿ ಸೇರ್ಪಡೆ ಕಾರ್ಯಕ್ರಮದಿಂದ ದೂರ ಉಳಿದ ಅನಂತ್ ನಾಗ್; ಕುತೂಹಲ ಕೆರಳಿಸಿದ ಮುಂದಿನ ನಡೆ

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಇಂದು(ಫೆ.22) ಸಂಜೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ರಾಜ್ಯದಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಹೀಗಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯತ್ತ ಎಲ್ಲರ ಗಮನವಿತ್ತು. ಇದೀಗ ಅನಂತ್ ನಾಗ್ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯಿಂದ ದೂರ ಉಳಿದರಾ? ಎಂಬ ಪ್ರಶ್ನೆ ಮೂಡಿದೆ.

    ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆರಂಭ ನಿಗದಿಯಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಮುನಿರತ್ನ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ವರದಿಯಾಗಿತ್ತು. ಹೀಗಾಗಿ ನಿಗದಿಯಾಗಿದ್ದ ಸಮಯದಂತೆ ಸಂಜೆ 4.30 ಕಳೆದರೂ ಅನಂತ್ ನಾಗ್ ಮಾತ್ರ ಬಿಜೆಪಿ ಕಚೇರಿಯತ್ತ ಬಂದಿಲ್ಲ. ಮುಂದಿನ ವಾರ ಪಕ್ಷ ಸೇರುವ ಕುರಿತು ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಕಂಡಕ್ಟರ್ 1 ರೂ. ಚಿಲ್ಲರೆ ನೀಡಿಲ್ಲ ಅಂತ ಕೋರ್ಟ್ ಮೊರೆ ಹೋಗಿದ್ದ ವ್ಯಕ್ತಿಗೆ ಸಿಕ್ಕಿತು 2000 ರೂ. ಪರಿಹಾರ!

    ಶಾಸಕ, ಪರಿಷತ್​ ಸದಸ್ಯರಾಗಿ ರಾಜಕೀಯ ಅನುಭವ ಹೊಂದಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇದಲ್ಲದೆ 2004ರಲ್ಲಿ ಜೆಡಿಎಸ್​​ನಿಂದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲ ಅನುಭವಿಸಿದ್ದರು.

    ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts