ಇಂದು ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು: ಕೇಂದ್ರ ಸಚಿವ ಎಚ್​.ಎನ್​.ಅನಂತ್​ಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತುಮಕೂರು ವಿವಿಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗೇ ರಾಜ್ಯದಲ್ಲಿರುವ ಎಲ್ಲ ರಾಷ್ಟ್ರೀಕೃತ ಬ್ಯಾಂಕ್​ಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅನಂತ್​ಕುಮಾರ್​ ಅವರು ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನ್ಯಾಷನಲ್​ ಕಾಲೇಜು ಮೈದಾನದಲ್ಲಿ ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ಅಂತಿಮ ದರ್ಶನ ಪಡೆಯುವ ಸಾಧ್ಯತೆಯೂ ಇದೆ.