ಡಿಸೆಂಬರ್ 1ಕ್ಕೆ 'ಅನಾವರಣ'; ಇಲ್ಲಿದೆ ಸಂಪೂರ್ಣ ವಿವರ

Untitled design (14)
Published on

ಬೆಂಗಳೂರು: ನಮ್ಮ ಸಿನಿಮಾ ಬ್ಯಾನರ್​ನಡಿ ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ .ಜಿ ಹಾಗೂ ರಚನಾ ಬಿ. ಹೆಚ್ ನಿರ್ಮಾಣದ 'ಅನಾವರಣ' ಸಿನಿಮಾದ ಎರಡನೇ ಹಾಡು ಇದೀಗ ಬಿಡುಗಡೆಯಾಗಿದ್ದು, ಈ ಚಿತ್ರವು ಇದೇ ಡಿಸೆಂಬರ್​ 01 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಈ ಹಿಂದೆ ಬಿಡುಗಡೆಯಾಗಿದ್ದ 'ಏನಾಗಿದೆ' ಪ್ರೇಮಗೀತೆ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ 'ಅನಾವರಣ' ಸಿನಿಮಾದ 'ರೀ ದೇವರೇ' ಎಂಬ ಮತ್ತೊಂದು ಗಾನಬಜಾನ ಬಿಡುಗಡೆಯಾಗಿದೆ. ಗಂಡ ಹೆಂಡತಿ ನಡುವಿನ ಮೆಲೋಡಿ ಮಸ್ತಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರೀಶ್ ಕುಮಾರ್ ಬಿ.ಕೆ ಹಾಗೂ ಮೇಘನಾ ಕುಲಕರ್ಣಿ ಜೋಶಿ ಹಾಡಿದ್ದಾರೆ.

ನಾಯಕ ಹಾಗೂ ನಾಯಕಿಯಾಗಿ ಅರ್ಜುನ್ ಯೋಗಿ ಮತ್ತು ಸಾರಿಕಾ ರಾವ್ ನಟಿಸಿದ್ದು, ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ದೀ ವಿನಾಯಕ, ಗಿರೀಶ್ ಯು.ಬಿ, ಶಿವರಾಜ್, ವಿಜಿ, ಬೇಬಿ ದೃತಿ ಶುತ್ವ, ಅಭಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿರುವ ಅನುಭವ ಈ ಇಬ್ಬರು ನಿರ್ದೇಶಕರಿಗೆ ಇದೆ ಎಂಬುದು ಗಮನಾರ್ಹ.

ವೆಂಕಿ ಸಂಕಲನ, ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಹಿನ್ನಲೆ ಸಂಗೀತ ಬಿ.ಆರ್.ಹೇಮಂತ್ ಕುಮಾರ್, ವಿಶಾಲ್ ಸಿ ಕೃಷ್ಣ ಸಂಗೀತ, ನಂದಕುಮಾರ್ ಛಾಯಾಗ್ರಹಣ, ಮದನ್ ಹರಿಣಿ ಮತ್ತು ರಾಮ್ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net