ಸೊರಬ: ತಾಲೂಕಿನ ಆನವಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಟಿ.ಬಿ.ರಾಜೇಂದ್ರ ನಾಯಕ್, ಉಪಾಧ್ಯಕ್ಷರಾಗಿ ಈರಪ್ಪ ತಲ್ಲೂರು ಅವಿರೋಧವಾಗಿ ಆಯ್ಕೆಯಾದರು.
12 ನಿರ್ದೇಶಕ ಬಲದ ಸಂಘದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಗೆ ಸರ್ವ ಸದಸ್ಯರು ಪಕ್ಷಾತೀತವಾಗಿ ಬೆಂಬಲ ಸೂಚಿಸಿದ್ದಾರೆ. ಹಾಗೆಯೇ ಡಿ.8ರಂದು ಎಲ್ಲ ನಿರ್ದೇಶಕರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದರು.
ಅಧ್ಯಕ್ಷ ರಾಜೇಂದ್ರ ನಾಯಕ್ ಮಾತನಾಡಿ, ಕಳೆದ 15 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ರೈತರ ಪರವಾಗಿ ಕೆಲಸ ಮಾಡುತ್ತಿದ್ದ ನನ್ನನ್ನು ಸಂಘದ ನಿರ್ದೇಶಕನಾಗಲು ಎಲ್ಲ ಷೇರುದಾರರು ಸಹಕರಿಸಿ ನಾಲ್ಕನೇ ಬಾರಿಗೆ ಮತ್ತೊಮ್ಮೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿರುವುದು ಸಂತೋಷ ತಂದಿದೆ. ಸಂಘದ ಅಭಿವೃದ್ಧಿಗೆ ಪೂರಕವಾಗಿ ಎಲ್ಲ ಸದಸ್ಯರ ಸಹಕಾರ ಪಡೆದು ಈಗಾಗಲೇ ಗೋದಾಮು ನಿರ್ಮಾಣ, ಕೃಷಿ ಪರಿಕರಗಳು, ಬಿತ್ತನೆ ಬೀಜ, ರಸಗೊಬ್ಬರಗಳ ಮಾರಾಟಕ್ಕೆ ಆದ್ಯತೆ ನೀಡಲಾಗುತ್ತಿದೆ. 550 ಜನ ಸದಸ್ಯರಿಗೆ 10 ಕೋಟಿ ರೂ. ಸಾಲ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರೈತರ ಪರವಾಗಿ ಮತ್ತಷ್ಟು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಚುನಾವಣಾಧಿಕಾರಿಯಾಗಿ ಬೆಂಡೆಕಟ್ಟೆ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪ್ರಕಾಶ್ ಮಡ್ಲೂರ್ ಕಾರ್ಯ ನಿರ್ವಹಿಸಿದರು. ನಿರ್ದೇಶಕರಾದ ನಾಗರಾಜ, ಸುರೇಂದ್ರ ಗೌಡ, ಮರುಬಸಪ್ಪ, ಕುಬೇರಪ್ಪ, ಕೃಷ್ಣಪ್ಪ, ಕೊಟ್ರೇಶಪ್ಪ, ಜಗದೀಶ್, ಪುಷ್ಪಮ್ಮ, ಸೋಮಮ್ಮ, ಪ್ರಭುಗೌಡ, ಕಾರ್ಯದರ್ಶಿ ಹರ್ಷ, ಎಚ್.ಸಿ.ಇಸುಬ್ ಸಾಬ್, ಅಜಿಮ್ ಸಾಬ್, ಶಿವಪ್ಪ, ಚಂದ್ರುಗೌಡ, ಉಮೇಶ್, ಹರೀಶ್, ಮಧು ಗೌಡ ಇತರರಿದ್ದರು.
ಆನವಟ್ಟಿ ಪಿಎಸಿಎಸ್‌ಗೆ ಅವಿರೋಧ ಆಯ್ಕೆ

You Might Also Like
ladies finger Benefits : ಬೆಂಡೆಕಾಯಿ ಒಳ್ಳೆಯದು, ಆದ್ರೆ ಅಪ್ಪಿತಪ್ಪಿಯೂ ಸಹ ಇವ್ರು ಬೆಂಡೆಕಾಯಿ ತಿನ್ನಲೇಬಾರದು..!
ladies finger Benefits : ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿಯು ಅನೇಕ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ…
ಇನ್ನೇನು ಬೇಸಿಗೆ ಶುರು… ನೀರಿನ ಜತೆ ಇದನ್ನು ಬೆರೆಸಿ ಸಿಂಪಡಿಸಿ ಹಾವುಗಳು ಮನೆ ಬಳಿ ಸುಳಿಯುವುದಿಲ್ಲ! Snake
Snake : ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ತಂಪಿನ ವಾತಾವರಣ ಅರಸಿಕೊಂಡು ಹಾವುಗಳು ಜನವಸತಿ ಪ್ರದೇಶಗಳತ್ತ…
ಚಳಿಗಾಲದಲ್ಲಿ ನೀವು ಹೆಚ್ಚು ನಿದ್ರೆ ಮಾಡುವುದು ಏಕೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಉತ್ತರ… Sleep
Sleep : ಚಳಿಗಾಲ ಬಂದಾಗ ಬಹುತೇಕರಿಗೆ ತುಂಬಾ ಆಲಸ್ಯವಾಗುತ್ತದೆ. ಏನೂ ಮಾಡಲೂ ಮನಸಿರುವುದಿಲ್ಲ. ಸೋಮಾರಿತನ ಕಾಡುತ್ತದೆ.…