More

    ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ

    ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸಹೋದರಿ ವೈಎಸ್​ಆರ್​ ತೆಲಂಗಾಣ ಪಕ್ಷದ ಸಂಸ್ಥಾಪಕಿ ಶರ್ಮಿಳಾ ಗುರುವಾರ ದೆಹಲಿಯಲ್ಲಿ ರಾಹುಲ್​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೇಪರ್ಡೆಯಾಗಿದ್ದಾರೆ.

    ಶರ್ಮಿಳಾ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ದಹೆಲಿಗೆ ಆಗಮಿಸಿದ್ದರು. ಇದರೊಂದಿಗೆ ಅವರ ಕಾಂಗ್ರೆಸ್​ ಸೇರ್ಪಡೆ ಕುರಿತು ಹಲವು ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆಬಿದ್ದಿದೆ.

    ಇತ್ತೀಚೆಗೆ ಮುಕ್ತಾಯಗೊಂಡ ತೆಲಂಗಾಣ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶರ್ಮಿಳಾ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಾರೆ ಅಥವಾ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ ಎಂಬ ಊಹಾಪೋಹ ಇತ್ತು. ಈ ಬಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ತಿಳಿಸಿದ್ದರು. ಅದರಂತೆ ಕಾಂಗ್ರೆಸ್​ ಪಕ್ಷದ ಶಾಲು ಹಾಕಿಸಿಕೊಂಡು ಅಧಿಕೃತವಾಗಿ ಸೇಪರ್ಡೆಯಾಗಿದ್ದಾರೆ.

    ಆಂಧ್ರಪ್ರದೇಶ ಕಾಂಗ್ರೆಸ್​ ಜವಾಬ್ದಾರಿ ಶರ್ಮಿಳಾ ಹೆಗಲಿಗೆ :ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಮರುಜೀವ ನೀಡುವ ಜವಾಬ್ದಾರಿಯನ್ನು ಆಕೆಗೆ ನೀಡಲಾಗುತ್ತಿದೆ ಎಂದು ವರದಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಅಣ್ಣ-ತಂಗಿ ನಡುವೆ ಜಂಗೀ ಕುಸ್ತಿ ಏರ್ಪಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಇದಲ್ಲದೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡುವ ಸಾಧ್ಯತೆಯಿದೆ ಮತ್ತು ಕರ್ನಾಟಕದಿಂದ ರಾಜ್ಯಸಭಾ ನಾಮನಿರ್ದೇಶನವನ್ನು ಪಡೆಯಬಹುದು, ಈ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜತೆಗೆ ಮಾತುಕತೆ ನಡೆದಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

    3000 ಕಿ.ಮೀ ಪಾದಯಾತ್ರೆ ಮಾಡಿದ್ದ ಶರ್ಮಿಳಾ: ಶರ್ಮಿಳಾ ತಮ್ಮ ರಾಜಕೀಯ ಪಯಣ ಆರಂಭಿಸಿದ್ದು ಕಷ್ಟದ ಪರಿಸ್ಥಿತಿಯಲ್ಲಿ, ಮೇ 2012 ರಲ್ಲಿ ಜಗನ್ ಅವರನ್ನು ಸಿಬಿಐ ಬಂಧಿಸಿತ್ತು. ಜಗನ್ ಮೋಹನ್​ ರೆಡ್ಡಿ ಜೈಲಿಗೆ ಹೋದ ನಂತರ ಶರ್ಮಿಳಾ ತಾಯಿ ವಿಜಯಮ್ಮ ಜೊತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರದ ಜವಾಬ್ದಾರಿ ವಹಿಸಿಕೊಂಡರು. ಈ ಅವಧಿಯಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯದ ಹೋರಾಟ ತೀವ್ರಗೊಂಡಿತ್ತು. ಈ ಸಂದರ್ಭದಲ್ಲೇ ಆಕೆಯ ಸಹೋದರ ಜಗನ್ ಕಾಂಗ್ರೆಸ್‌ನಿಂದ ಹೊರಬಂದು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಸ್ಥಾಪಿಸಿದ್ದರು. ಅವರೊಂದಿಗೆ 18 ಶಾಸಕರು ಬಂದು ಸೇರಿಕೊಂಡಿದ್ದಲ್ಲದೆ, ಕಾಂಗ್ರೆಸ್ ಸಂಸದರೊಬ್ಬರು ರಾಜೀನಾಮೆಯನ್ನೂ ನೀಡಿದ್ದರು.

    2012 ರ ಅಕ್ಟೋಬರ್‌ನಲ್ಲಿ ಕಡಪಾ ಜಿಲ್ಲೆಯ ಇಡುಪುಲಪಾಯದಿಂದ 3,000 ಕಿ.ಮೀ ಪಾದಯಾತ್ರೆ ಆರಂಭಿಸಿದ ಶರ್ಮಿಳಾ ಅದನ್ನು ಆಗಸ್ಟ್ 2013 ರಲ್ಲಿ ಇಚ್ಚಾಪುರದಲ್ಲಿ ಪೂರ್ಣಗೊಳಿಸಿದರು.

    ಪ್ರತ್ಯೇಕ ತೆಲಂಗಾಣ ರಾಜ್ಯದ ಹೋರಾಟ ತೀವ್ರಗೊಂಡಿ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷದಿಂದ ಹೊರಬಂದು ಹಿರಿಯ ಸಹೋದರ ಜಗನ್ ಜೊತೆ ಸೇರಿ ವೈಎಸ್​ಆರ್​ಸಿಪಿ ಪಕ್ಷ ಸ್ಥಾಪಿಸಿದ್ದ ಶರ್ಮಿಳಾ ಮತ್ತೆ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿ ತಮ್ಮ ಸಹೋದರನಿಗೆ ಸೆಡ್ಡು ಹೊಡೆಯಲು ಸಿದ್ಧವಾಗುತ್ತಾರೆ ಎಂದು ಹೇಳಲಾಗುತ್ತಿದೆ.

    ಕೋರ್ಟ್​​​ ವಿಚಾರಣೆ ವೇಳೆ ನ್ಯಾಯಧೀಶೆ ಮೇಲೆ ದಾಳಿ ಮಾಡಿದ ಕೈದಿ; ವಿಡಿಯೋ ವೈರಲ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts