ಅಮರಾವತಿ: ಪಕ್ಕದ ಆಂಧ್ರಪ್ರದೇಶದಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಆಂಧ್ರಪ್ರದೇಶದ 20 ಜನರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಬುಧವಾರ ಘೋಷಿಸಿದ್ದಾರೆ.
ಇದನ್ನೂ ಓದಿ: ಪಿಎಸ್ಐ ಪರೀಕ್ಷೆ ಮುಂದೂಡಿಕೆ ಇಲ್ಲ, ಸೆ.22ಕ್ಕೆ ಫಿಕ್ಸ್: ಕೆಇಎ ಸ್ಪಷ್ಟನೆ
ರಾಜ್ಯಾದ್ಯಂತ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಸಂಖ್ಯೆ 6.44 ಲಕ್ಷಕ್ಕೆ ಏರಿಕೆಯಾಗಿದ್ದು, 193 ಕಾಳಜಿ ಕೇಂದ್ರಗಳಲ್ಲಿ 42,707 ಮಂದಿಗೆ ಆಶ್ರಯ ನೀಡಲಾಗಿದೆ. ರಾಜ್ಯದ ಪರಿಸ್ಥಿತಿ ಮತ್ತು ಮಳೆಯಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡ ಪರಿಹಾರ ಕ್ರಮಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಿ ಅಂತ್ಯಕ್ರಿಯೆ ನೆರವೇರಿಸಲು ನೆರವಾಗುವಂತೆ ಅಧಿಕಾರಿಗಳಿಗೆ ಸಿಎಂ ಟೆಲಿಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಂಕಷ್ಟದಲ್ಲಿ ಸಿಲುಕಿರುವವರಿಗೆ ಅತ್ಯಗತ್ಯವಾದ ನೀರು, ಬಿಸ್ಕೆಟ್, ಹಣ್ಣು, ಹಾಲು ಮುಂತಾದ ಅಗತ್ಯ ವಸ್ತುಗಳನ್ನು ವಿತರಿಸಬೇಕು. ಮೊಬೈಲ್ ಮಾರುಕಟ್ಟೆಗಳ ವ್ಯವಸ್ಥೆ ಮಾಡಿ ಕಡಿಮೆ ಬಲೆಗೆ ತರಕಾರಿಗಳು ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವೈರಲ್ ಜ್ವರ ಹರಡುವ ಭೀತಿ ಇರುವ ಕಾರಣ ಈ ಕುರಿತು ಜನರಲ್ಲಿ ಅರಿವು ಮೂಡಿಸಲು ಹಾಗೂ ವೈದ್ಯಕೀಯ ಶಿಬಿರಗಳನ್ನು ತೆರೆದು ಅಗತ್ಯ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಬುಧವಾರ ಬೆಳಗ್ಗೆ 2.3 ಲಕ್ಷ ಉಪಹಾರ ಪ್ಯಾಕೆಟ್‌ಗಳನ್ನು, ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ 4.5 ಲಕ್ಷ ಪ್ಯಾಕೆಟ್‌ಗಳ ಆಹಾರ ಪ್ಯಾಕೆಟ್‌ಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜಸ್ಥಾನ: ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ!