More

    ಬಹುಕೋಟಿ ವಂಚನೆ ಪ್ರಕರಣ; ಚಂದ್ರಬಾಬು ನಾಯ್ಡುಗೆ ಸದ್ಯಕ್ಕಿಲ್ಲ ರಿಲೀಫ್​

    ಅಮರಾವತಿ: ಕೌಶಲ್ಯಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದೆ.

    ಚಾರ್ಜ್​ಶೀಟ್​ನಲ್ಲಿ ತಮ್ಮ ಹೆಸರು ಇಲ್ಲದಿದ್ದರೂ ಸಹ ಅಕ್ರಮವಾಗಿ ಬಂಧಿಸಿ FIR ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದನ್ನು ಪ್ರಶ್ನಿಸಿ ಚಂದ್ರಬಾಬು ನಾಯ್ಡು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿ ತಿರಸ್ಕರಿಸಿ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ.

    Chandrababu Naidu

    ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಸುಖ್​ ಧೂಲ್​ ಹತ್ಯೆ ಪ್ರಕರಣ; ಹೊಣೆ ಹೊತ್ತ ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್

    ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿ ಎಪಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 22ಕ್ಕೆ ಮುಂದೂಡಿತ್ತು.

    ಪೊಲೀಸರು ನಾಯ್ಡು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ಹಿಂದೆ ವಿಧಿಸಲಾಗಿದ್ದ ಬಂಧನದ ಅವಧಿ ಸೆಪ್ಟೆಂಬರ್ 22ಕ್ಕೆ ಕೊನೆಗೊಂಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿಜಯವಾಡದ ಎಸಿಬಿ ನ್ಯಾಯಾಲಯವು ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿ ಆದೇಶಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts